ಚನ್ನಪಟ್ಟಣ: ಉಪಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ನೀವು ಸಂಪೂರ್ಣವಾಗಿ ಒಪ್ಪಿದರೆ ನಾನೇ ಆಗುತ್ತೇನೆ. ಇಲ್ಲವಾದಲ್ಲಿ ನಿಖಿಲ್ ಅಭ್ಯರ್ಥಿಯಾದರೂ ನಾನು ಬೆಂಬಲ ನೀಡುತ್ತೇನೆ. ಈ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಒಂದು ವಾರದಲ್ಲಿ ಸ್ಪಷ್ಟತೆ ನೀಡುವಂತೆ ಕುಮಾರಸ್ವಾಮಿ ಬಳಿ ಯೋಗೇಶ್ವರ್ ಕೇಳಿಕೊಂಡಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ಎಂಎಲ್‌ಸಿ ಸಿಪಿ ಯೋಗೇಶ್ವರ್ ದೆಹಲಿಯಲ್ಲಿ ಸಭೆ ನಡೆಸಿದ್ದು, ಈ ವೇಳೆ, ನೀವೇ ಮುಂದೆ ನಿಂತು ಉಪಚುನಾವಣೆಯನ್ನು ನಡೆಸಬೇಕು ಎಂದು ಕುಮಾರಸ್ವಾಮಿ ಬಳಿ ಯೋಗೇಶ್ವರ್ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷ ತಯಾರಿ ಆರಂಭಿಸಿದೆ. ಅಭ್ಯರ್ಥಿಯನ್ನು ಬೇಗ ಘೋಷಿಸಿದರೆ ನಾವು ಸಿದ್ಧತೆ ಆರಂಭಿಸಬಹುದು ಎಂದು ಯೋಗೇಶ್ವರ್ ಹೇಳಿದ್ದಾರೆ.