Friday, April 11, 2025
Google search engine

Homeರಾಜ್ಯಸುದ್ದಿಜಾಲಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ

ಅಧಿಕಾರಿಗಳು ಮತ್ತು ಮುಖಂಡರು ಲಂಚ ಕೇಳಿದರೆ ನನ್ನ ವಿಳಾಸಕ್ಕೆ ಪತ್ರ ಬರೆಯಿರಿ: ಡಿಕೆಶಿ

ರಾಮನಗರ: ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು ಸಹಿತ ಪತ್ರ ಬರೆಯಿರಿ ಎಂದು ಸಾರ್ವಜನಿಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು. ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ. ಆದರೂ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಜನರು ಆಶೀರ್ವಾದ ಮಾಡಲಿಲ್ಲ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ ಎಂದರು.

ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡು, ಮೂರು ಲಕ್ಷ ಬಾಳುತ್ತಿದ್ದ ಜಮೀನುಗಳ ಬೆಲೆ ದುಪ್ಪಟ್ಟಾಗಿದೆ. ನಾನು ಹಿಂದೆ ಜಮೀನುಗಳನ್ನು ಮಾರಬೇಡಿ ಎಂದು ಸಲಹೆ ನೀಡಿದ್ದೆ. ಆದರೂ ಒಂದಷ್ಟು ಜನ ಜಮೀನುಗಳನ್ನು ಮಾರಿಕೊಂಡಿದ್ದಾರೆ. ಈ ಭಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಎಂಟು ಎಕರೆಯಲ್ಲಿ ಸಿಎಎಸ್‌ಆರ್ ನಿಧಿಯಿಂದ ದೊಡ್ಡ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇನೆ. ಜೊತೆಗೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನೀಡಿ ಜನರನ್ನು ಸಬಲರನ್ನಾಗಿ ಮಾಡಿದೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular