Thursday, April 3, 2025
Google search engine

Homeರಾಜಕೀಯನಮ್ಮ ಸಭೆ ಸಹಿಸಲ್ಲ ಅಂದ್ರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ: ಡಾ.ಜಿ.ಪರಮೇಶ್ವರ್

ನಮ್ಮ ಸಭೆ ಸಹಿಸಲ್ಲ ಅಂದ್ರೆ ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ: ಡಾ.ಜಿ.ಪರಮೇಶ್ವರ್

ಬೆಂಗಳೂರು: ಇಂದು ನಡೆಯಬೇಕಿದ್ದ ಡಿನ್ನರ್ ಮೀಟಿಂಗ್ ರದ್ದುಗೊಳಿಸಿರುವ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಈ ಸಭೆ ಮುಂದಕ್ಕೆ ಹಾಕಿದ್ದೇವೆ. ನಿಗದಿಯಾದಾಗ ಮತ್ತೆ ಹೇಳುತ್ತೇವೆ ಎಂದಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ನಮ್ಮ ಸಭೆಯನ್ನು ಸಹಿಸುವುದಿಲ್ಲ ಅಂತ ಯಾರೂ ಹೇಳಿಲ್ಲ. ನಮ್ಮ ಸಭೆ ಸಹಿಸಲ್ಲ ಅಂದ್ರೆ ಅದಕ್ಕ ತಕ್ಕ ಉತ್ತರ ಕೊಡತ್ತೇವೆ. ಆ ಶಕ್ತಿ ಇದೆ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಹೈಕಮಾಂಡ್ ಗೆ ದೂರು ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ದೂರು ಕೊಟ್ಟಿರುವ ಬಗ್ಗೆ ನನಗೆ ಗೊತ್ತಿಲ್ಲ. ಈ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ರನ್ನೂ ಕರೆಯಬೇಕು ಅಂತಾ ಚರ್ಚೆಯಾಗಿತ್ತು. ರಾಜಕಾರಣ ಮಾಡುವುದಾದರೇ ಓಪನ್ ಆಗಿಯೇ ಮಾಡುತ್ತೇವೆ ಮುಚ್ಚುಮರೆ ಇಲ್ಲ. ದಲಿತ ಸಮುದಾಯದ ಮೇಲಿನ ದೌರ್ಜನ್ಯ ಬಗ್ಗೆ ಚರ್ಚೆ ಆಗಬೇಕು. ಈ ಸಭೆ ಮುಂದಕ್ಕೆ ಹಾಕಿದ್ದೇವೆ. ನಿಗದಿಯಾದಾಗ ಮತ್ತೆ ಹೇಳುತ್ತೇವೆ ಎಂದರು.

RELATED ARTICLES
- Advertisment -
Google search engine

Most Popular