Saturday, April 12, 2025
Google search engine

Homeರಾಜಕೀಯಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯುವುದಿಲ್ಲ: ಯದುವೀರ್ ಒಡೆಯರ್

ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯುವುದಿಲ್ಲ: ಯದುವೀರ್ ಒಡೆಯರ್

ಶಿವಮೊಗ್ಗ: ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಸಿಎಂ ಸ್ಥಾನ ಪ್ರಭಾವ ಇರುವ ಸ್ಥಾನ. ಹಾಗಾಗಿ ಅವರು ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು. ಹಗರಣ ನಡೆದಿರುವ ಬಗ್ಗೆ ಎಲ್ಲವೂ ಸ್ಪಷ್ಟವಾಗಿದೆ. ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯುವುದಿಲ್ಲ. ಹಾಗಾಗಿ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪ್ರತಿ ಗ್ರಾಮ ಪಂಚಾಯತಿಯಲ್ಲಿ ಸಹಕಾರ ಸಂಘ ಸ್ಥಾಪಿಸಬೇಕು ಎನ್ನುವುದು ಪ್ರಧಾನಿ ಅವರ ಕನಸು. ಹಾಗಾಗಿ ಈಗಾಗಲೇ ಪ್ರಧಾನಿಯವರು ಘೋಷಣೆ ಮಾಡಿದ್ದಾರೆ ಎಂದರು.

ವಿಐಎಸ್ ಎಲ್ ಕನ್ನಡಿಗರ ಹೆಮ್ಮೆಯ ಸಂಸ್ಥೆ ಅದು. ಅದರ ಉಳಿವಿಗಾಗಿ ನಮ್ಮ‌ ಪ್ರಯತ್ನ ಇರುತ್ತದೆ ಎಂದು ಯದುವೀರ್‌ ಹೇಳಿದರು.

RELATED ARTICLES
- Advertisment -
Google search engine

Most Popular