ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಮಹನೀಯರು, ಸಾಧಕರು ಮತ್ತು ಸಮಾಜ ಸುಧಾರಕರ ಜಯಂತಿಗಳಿಗೆ ಅರ್ಥ ಮತ್ತು ಗೌರವ ಬರಬೇಕಾದರೆ ಅವರುಗಳ ತತ್ವ ಮತ್ತು ಸಿದ್ದಾಂತಗಳನ್ನು ಪಾಲನೆ ಮಾಡಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ತಾಲೂಕು ಕಛೇರಿ ಆವರಣದಲ್ಲಿ ಶುಕ್ರವಾರ ನಡೆದ ಸವಿತ ಮಹರ್ಷಿ, ಛತ್ರಪತಿ ಶಿವಾಜಿ, ಸಂತ ಕವಿ ಸರ್ವಜ್ಞ ಮತ್ತು ಸಂತಸೇವಾಲಾಲ್ ಅವರುಗಳ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದ ಸಣ್ಣ ಮತ್ತು ಸತಿಸಣ್ಣ ಸಮುದಾಯಗಳ ಜನರು ಒಂದಾಗಿ ತಮ್ಮ ಧ್ವನಿಯನ್ನು ಎತ್ತರಿಸಿಕೊಂಡು ಮುಖ್ಯವಾಹಿನಿಗೆ ಬರಲಿ ಎಂಬ ಸದ್ದುದ್ದೇಶದಿಂದ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಿದ್ದರಾಮಯ್ಯನವರು ಇಂತಹಾ ಸುಧಾರಕರ ಜಯಂತಿ ಆಚರಣೆ ಜಾರಿಗೆ ತಂದರು ಎಂದು ತಿಳಿಸಿದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಹಿಂದುಳಿದ ವರ್ಗಗಳ ಸಮಾಜದ ಜನರ ಸಮುದಾಯ ಭವನಗಳ ನಿರ್ಮಾಣಕ್ಕೆ ನಾನು ಈ ಹಿಂದೆಯೇ ಅಧಿಕಾರದಲ್ಲಿ ಇಲ್ಲದಿದ್ದರೂ ಅಂದಿನ ಮುಖ್ಯಮಂತ್ರಿಗಳಾಗಿದ್ದ ಸಿದ್ದರಾಮಯ್ಯನವರಿಂದ ಕೋಟ್ಯಾಂತರ ರೂ ಅನುದಾನ ಬಿಡುಗಡೆ ಮಾಡಿಸಿದ್ದು ಮುಂದೆಯೇ ಸದಾ ನಿಮ್ಮ ಬೆನ್ನ ಹಿಂದೆ ಇರುತ್ತೇನೆ ಎಂದು ಭರವಸೆ ನೀಡಿದರು.
ಕೆ.ಆರ್.ನಗರ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಸವಿತಾ ಸಮಾಜದ ಸಮುದಾಯ ಭವನಕ್ಕೆ ಅಗತ್ಯ ಅನುದಾನ ಕೊಡಿಸುವುದರ ಜತೆಗೆ ಸಾಲಿಗ್ರಾಮ ತಾಲೂಕು ಕೇಂದ್ರದಲ್ಲಿಯೂ ಭವನ ನಿರ್ಮಾಣಕ್ಕೆ ನಿವೇಶನ ಕೊಡಿಸಿ ಅದರೊಂದಿಗೆ ಅನುದಾನ ಮಂಜೂರು ಮಾಡಿಸಿ ಇದರೊಟ್ಟಿಗೆ ಕೆ.ಆರ್.ನಗರದಲ್ಲಿ ಸವಿತಾ ಸಮಾಜದ ಬಾಂಧವರು ಮಂಗಳವಾದ್ಯ ತರಬೇತಿ ಪಡೆಯಲು ಪ್ರತ್ಯೇಕ ಭವನ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಎನ್.ನಾಗೇಶ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹೆಚ್.ಎಸ್.ಪ್ರಕಾಶ್, ತಾಲೂಕು ಕೇಶಾಲಂಕಾರಿ ಸಂಘದ ಅಧ್ಯಕ್ಷ ಎಂ.ಎಸ್.ರಾಜೇಶ್, ಸಾಹಿತಿ ಹೆಗ್ಗಂದೂರುಪ್ರಭಾಕರ್, ನಿವೃತ್ತ ಉಪನ್ಯಾಸಕ ಈರೋಜಿರಾವ್ ಮತ್ತಿತರರು ಮಾತನಾಡಿದರು.
ತಾಲೂಕು ಕಾಯಕ ಸಮಾಜಗಳ ಒಕ್ಕೂಟದ ಅಧ್ಯಕ್ಷ ತಿಮ್ಮಶೆಟ್ಟಿ, ಪುರಸಭೆ ಸದಸ್ಯ ಕೋಳಿಪ್ರಕಾಶ್, ಮಾಜಿ ಸದಸ್ಯ ಕೆ.ಎಲ್.ರಾಜೇಶ್, ಸಾಹಿತಿ ಎ.ಹರೀಶ್‌ಕುಮಾರ್, ತಹಶೀಲ್ದಾರ್ ಸಿ.ಎಸ್.ಪೂರ್ಣಿಮ, ಸಾಲಿಗ್ರಾಮ ತಹಶೀಲ್ದಾರ್ ಹೆಚ್.ಎನ್.ನರಗುಂದ್, ತಾಲೂಕು ಮರಾಠ ಕ್ಷತ್ರೀಯ ಸಂಘದ ಅಧ್ಯಕ್ಷ ಕೆ.ಗೋಪಾಲ್‌ರಾವ್, ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್ ಜಾಬೀರ್, ಕೇಶಾಲಂಕಾರಿ ಸಂಘದ ಉಪಾಧ್ಯಕ್ಷ ಭಾಸ್ಕರ್, ಪ್ರಧಾನ ಕಾರ್ಯದರ್ಶಿ ಕುಮಾರ್, ಪದಾಧಿಕಾರಿಗಳಾದ ಸ್ವಾಮಿ, ವೆಂಕಟೇಶ್, ರಘು, ಸುಧಾಕರ್, ಮಂಜುನಾಥ್, ಕಲಾ ಸಂಘದ ಅಧ್ಯಕ್ಷ ಕೆ.ಪಿ.ನಾರಾಯಣ್, ಪಿ.ಕುಮಾರ್ ಮತ್ತಿತರರು ಹಾಜರಿದ್ದರು.