Tuesday, April 22, 2025
Google search engine

Homeರಾಜ್ಯಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕನಿಷ್ಠ ವೇತನ ದಿನಕ್ಕೆ ರೂ. ೪೦೦: ಖರ್ಗೆ ಭರವಸೆ

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕನಿಷ್ಠ ವೇತನ ದಿನಕ್ಕೆ ರೂ. ೪೦೦: ಖರ್ಗೆ ಭರವಸೆ

ಹೊಸದಿಲ್ಲಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಕನಿಷ್ಠ ವೇತನವನ್ನು ೪೦೦ ರೂಪಾಯಿಗೆ ಏರಿಸುವುದಾಗಿ ಕಾಂಗ್ರೆಸ್ ಪಕ್ಷ ಭರವಸೆ ನೀಡಿದೆ. ಇದೇ ವೇತನ ನರೇಗಾ ಯೋಜನೆಗೂ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ಬಗ್ಗೆ ಹೇಳಿಕೆ ನೀಡಿ, ಕಳೆದ ಹತ್ತು ವರ್ಷಗಳಲ್ಲಿ ಮೋದಿ ಸರ್ಕಾರ ಕೇವಲ ಶೇಕಡ ೧ರಷ್ಟು ಮಾತ್ರ ವೇತನವನ್ನು ಏರಿಸಿದೆ. ಯುಪಿಎ ಅಧಿಕಾರದ ಅವಧಿಯಲ್ಲಿ ಅಂದರೆ ೨೦೦೯-೧೪ರ ಅವಧಿಯಲ್ಲಿ ಕೃಷಿ ಹಾಗೂ ಕೃಷಿಯೇತರ ವಲಯಗಳಲ್ಲಿ ಇದು ಕ್ರಮವಾಗಿ ಶೇಕಡ ೮.೬ ಮತ್ತು ೬.೯ರಷ್ಟಿತ್ತು ಎಂದು ಅವರು ಅಂಕಿ ಅಂಶ ನೀಡಿದ್ದಾರೆ. ಪ್ರಸ್ತುತ ಕನಿಷ್ಠ ವೇತನ ದಿನಕ್ಕೆ ೧೭೬ ರೂಪಾಯಿ ಇದ್ದು, ಈ ಹಿನ್ನೆಲೆಯಲ್ಲಿ ಖರ್ಗೆ ಹೇಳಿಕೆ ಮಹತ್ವ ಪಡೆದಿದೆ.

ಕಳೆದ ಹತ್ತು ವರ್ಷಗಳಲ್ಲಿ ನಿರುದ್ಯೋಗ ಹಲವು ಪಟ್ಟು ಹೆಚ್ಚಿದೆ. ಕೃಷಿಯನ್ನು ಅವಲಂಬಿಸಿರುವ ಜನರ ಸಂಖ್ಯೆ ೨೦೧೬ರಲ್ಲಿ ಶೇಕಡ ೪೧ರಷ್ಟಿದ್ದುದು ಈಗ ಶೇಕಡ ೪೭ಕ್ಕೆ ಹೆಚ್ಚಿರುವುದು ಇದಕ್ಕೆ ನಿದರ್ಶನ ಎಂದು ಕಾಂಗ್ರೆಸ್ ವಕ್ತಾರ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular