Friday, December 12, 2025
Google search engine

Homeರಾಜಕೀಯನಾವು ಮಾತನಾಡಿದ್ರೆ ಬಲಾತ್ಕಾರ ಅವರು ಹೇಳಿದ್ರೆ ಚಮತ್ಕಾರ : ಇಕ್ಬಾಲ್‌ ಹುಸೇನ್‌

ನಾವು ಮಾತನಾಡಿದ್ರೆ ಬಲಾತ್ಕಾರ ಅವರು ಹೇಳಿದ್ರೆ ಚಮತ್ಕಾರ : ಇಕ್ಬಾಲ್‌ ಹುಸೇನ್‌

ಬೆಳಗಾವಿ : ನಾವು ಮಾತನಾಡಿದರೆ ಬಲಾತ್ಕಾರ, ಅವರು ಮಾತನಾಡಿದರೆ ಚಮತ್ಕಾರ ಎಂದು ರಾಮನಗರದ ಕಾಂಗ್ರೆಸ್‌ ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಾವು ಏನಾದರೂ ಮಾತನಾಡಿದರೆ ನೋಟಿಸ್ ಕೊಡುತ್ತಾರೆ. ನಮ್ಮ ವರಿಷ್ಠರು ಅಷ್ಟು ವೀಕ್‌ ಇಲ್ಲ, ಬಲಿಷ್ಠವಾಗಿದೆ ಎಂದು ತಿಳಿಸಿದ್ದಾರೆ.

ಈ ಕುರಿತು ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಯತೀಂದ್ರ ಹೇಳಿಕೆ ಹಿಂದೆ ಯಾರಿದ್ದಾರೆ ಗೊತ್ತಿಲ್ಲ. ಪದೇ ಪದೇ ಅವರು ನೀಡುವ ಹೇಳಿಕೆಯ ಬಗ್ಗೆ ಅವರನ್ನೇ ಕೇಳಬೇಕು. ನಮಗೆ ಹೇಳಿಕೆ ಕೊಡಬೇಡಿ ಎಂದಿದ್ದಾರೆ. ಹೀಗಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
ಈ ಹಿಂದೆ ಡಿಕೆ ಶಿವಕುಮಾರ್‌ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳಿದ್ದಕ್ಕೆ ಇಕ್ಬಾಲ್‌ ಹುಸೇನ್‌ ಅವರಿಗೆ ಶಿಸ್ತು ಸಮಿತಿ ನೋಟಿಸ್‌ ಜಾರಿ ಮಾಡಿತ್ತು ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular