Saturday, January 10, 2026
Google search engine

Homeಅಪರಾಧಕಾನೂನುಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಜಾ

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಜಾ

ಮಂಗಳೂರು: ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್ ನೀಡಲಾಗಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮಹೇಶ್ ಶೆಟ್ಟಿ ತಿಮರೋಡಿ ಅವರು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಂತ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿತು.

ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಮೂರು ಬಾರಿ ಬೆಳ್ತಂಗಡಿ ಠಾಣೆಯ ಪೊಲೀಸರು ನೋಟಿಸ್ ನೀಡಿದ್ದರು. ಪೊಲೀಸರು ನೀಡಿದ ಮೂರು ನೋಟಿಸ್ ಗೂ ಪ್ರತಿಕ್ರಿಯಿಸದೆ ತಿಮರೋಡಿ ಅಜ್ಞಾತವಾಗಿದ್ದರು.

ಮಹೇಶ್ ಶೆಟ್ಟಿ ತಿಮರೋಡಿ ವಿಚಾರಣೆಗೆ ಹಾಜರಾದರೆ ಬಂಧನ ಭೀತಿ ಕಾರಣಕ್ಕೆ ನಾಪತ್ತೆಯಾಗಿದ್ದರು. ಕಳೆದ 20 ದಿನಗಳಿಂದ ತಲೆಮರೆಸಿಕೊಂಡಿರುವ ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

RELATED ARTICLES
- Advertisment -
Google search engine

Most Popular