Friday, January 9, 2026
Google search engine

Homeರಾಜ್ಯಅಕ್ರಮ ಬಿಪಿಎಲ್ ಕಾರ್ಡ್ ರದ್ದು: ಗೃಹಲಕ್ಷ್ಮೀ ಹಣ ಸ್ಥಗಿತ

ಅಕ್ರಮ ಬಿಪಿಎಲ್ ಕಾರ್ಡ್ ರದ್ದು: ಗೃಹಲಕ್ಷ್ಮೀ ಹಣ ಸ್ಥಗಿತ

ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮೀ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್​ ರದ್ದುಗೊಳಿಸಲಾಗಿದ್ದು, ಇದೀಗ ಅಂತವರ ಗೃಹಲಕ್ಷ್ಮೀ ಹಣ ಸಹ ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular