Saturday, February 28, 2026
Google search engine

Homeಅಪರಾಧಕೊಳ್ನಾಡು ಕರೈ ಎಂಬಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ

ಕೊಳ್ನಾಡು ಕರೈ ಎಂಬಲ್ಲಿ ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ಬಂಟ್ವಾಳ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ಬೆಳಕಿಗೆ ಬಂದಿದೆ.
ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನ ನಿಂತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ವಿಟ್ಲ ಪೊಲೀಸರು ಸ್ಥಳಕ್ಕೆ ಹೋದಾಗ ಸ್ಥಳದಲ್ಲಿ ಅಶೋಕ್ ಲೈಲ್ಯಾಂಡ್ ದೋಸ್ತ್ ವಾಹನವೊಂದು ರಸ್ತೆ ಬದಿಯಲ್ಲಿ ನಿಂತಿತ್ತು. ಅದರಲ್ಲಿ ಎರಡೂ ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಎಲ್ಲಿಂದಲೋ ಸಾಗಾಟ ಮಾಡಿಕೊಂಡು ಬಂದಿರುವುದು ಕಂಡುಬಂದಿದೆ. ಈ ಬಗ್ಗೆ ವಾಹನದಲ್ಲಿದ್ದ ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಮತ್ತೊರ್ವ ಚೇತನ್ ಎಂಬವರಲ್ಲಿ ವಿಚಾರಿಸಿದಾಗ ಚನ್ನರಾಯಪಟ್ಟಣದಿಂದ ಶಂಕರ ಎಂಬವರು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಸಾಲೆತ್ತೂರಿನ ಶಾಫಿ ಎಂಬುವವರಿಗೆ, ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ತುಂಬಿಸಿ ಕಳುಹಿಸಿದ್ದು, ಜಾನುವಾರುಗಳನ್ನು ಸಾಗಿಸಲು ಬೇರೆಯವರ ಹೆಸರಿನಲ್ಲಿ ದಾಖಲಾತಿಯನ್ನು ಪಡೆದು ಸಾಗಿಸುತ್ತಿರುವುದು ತಿಳಿದುಬಂದಿದೆ. ಈ ಬಗ್ಗೆ ಮುಂದಿನ ಕಾನೂನು ಕ್ರಮಕ್ಕಾಗಿ ವಾಹನವನ್ನು ಹಾಗೂ ಜಾನುವಾರುಗಳನ್ನು ಸ್ವಾಧೀನಪಡಿಸಿಕೊಂಡು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 51/2026, ಕಲಂ: 4, 7, 12 THE KARNATAKA PREVENTION OF SLAUGHTER AND PRESERVATION OF CATTLE ACT-2020, 4, 11 PREVENTION OF CRUELTY TO ANIMALS ACT, 1960 ಮತ್ತು 192(A) INDIAN MOTOR VEHICLES ACT, 1988 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular