Thursday, April 17, 2025
Google search engine

Homeಅಪರಾಧಕಾನೂನುಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್‌ ಸೇರಿ ಮೂವರಿಗೆ ಏ.21ರವರೆಗೆ ನ್ಯಾಯಾಂಗ ಬಂಧನ

ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್‌ ಸೇರಿ ಮೂವರಿಗೆ ಏ.21ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾರಾವ್‌, ಆಕೆಯ ಸಹಚರ­ರಾದ ತರುಣ್‌ ಕೊಂಡುರಾಜು ಮತ್ತು ಬಳ್ಳಾರಿಯ ಸಾಹಿಲ್‌ ಜೈನ್‌ನ ನ್ಯಾಯಾಂಗ ಬಂಧನ ಅವಧಿಯನ್ನು ಏ.21ರವರೆಗೆ ವಿಸ್ತರಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡಿದ್ದರಿಂದ ಮೂವ­ರನ್ನು ಸೋಮವಾರ ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ಕೋರ್ಟ್‌ ಆರೋ­ಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಏ.21ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಈ ಮಧ್ಯೆ ಆರೋಪಿಗಳ ಪೈಕಿ ತರುಣ್‌ಕೊಂಡುರಾಜು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸೆಷನ್ಸ್‌ ಕೋರ್ಟ್‌ ತಿರಸ್ಕರಿಸಿದೆ. ಆರೋಪಿ ಗಂಭೀರ ಸ್ವರೂಪದ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಮತ್ತೂಂದೆಡೆ ಪ್ರಕರಣದ ತನಿಖೆ ಇನ್ನು ನಡೆಯುತ್ತಿದೆ. ಈ ವೇಳೆ ಆರೋಪಿ ಜಾಮೀನು ನೀಡಬಾರದು ಎಂದು ಡಿಐಆರ್‌ ಪರ ವಕೀಲರು ಕೋರ್ಟ್‌ಗೆ ಮನವಿ ಮಾಡಿದರು. ಅದಕ್ಕೆ ಸಮ್ಮತಿಸಿದ ಕೋರ್ಟ್‌ ಆರೋಪಿಯ ಜಾಮೀನು ಅರ್ಜಿ ತಿರಸ್ಕರಿ­ಸಿದೆ. ಇನ್ನು ಮತ್ತೂಬ್ಬ ಆರೋಪಿ ಸಾಹಿಲ್‌ ಜೈನ್‌ ಕೂಡ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ಏ.9ಕ್ಕೆ ಮುಂದೂಡಿ ಸೆಷನ್ಸ್‌ ಕೋರ್ಟ್‌ ಆದೇಶಿಸಿದೆ.

RELATED ARTICLES
- Advertisment -
Google search engine

Most Popular