Tuesday, May 6, 2025
Google search engine

Homeರಾಜ್ಯಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು: CBI ಕೋರ್ಟ್ ಮಹತ್ವದ ಆದೇಶ

ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು: CBI ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮುಖಂಡ, ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಘೋಷಿಸಿದೆ. ಓಬಳಾಪುರಂ ಪ್ರದೇಶದಲ್ಲಿ 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು.

ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ಬಿ.ವಿ.ಶ್ರೀನಿವಾಸರೆಡ್ಡಿ, ವಿ.ಡಿ.ರಾಜಗೋಪಾಲ್, ದಿ. ರಾವ್ ಲಿಂಗಾರೆಡ್ಡಿ, ಕೆ.ಮೆಹಫೂಸ್ ಅಲಿ ಖಾನ್ ಅವರೂ ಅಪರಾಧಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.

RELATED ARTICLES
- Advertisment -
Google search engine

Most Popular