Friday, April 4, 2025
Google search engine

Homeಅಪರಾಧಕಾನೂನುಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಶಾಸಕ ಯತ್ನಾಳ್ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆ

ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಶಾಸಕ ಯತ್ನಾಳ್ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆ

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಕೆಲವೇ ದಿನಗಳಲ್ಲಿ ಇದೀಗ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಕಾನೂನು ಹೋರಾಟ ಮುಂದುವರಿಸುವ ಸಂದೇಶ ರವಾನಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ಪ್ರಕರಣ ಹಿಂಪಡೆಯುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಆಗಸ್ಟ್ 29ರಂದು ಹೈಕೋರ್ಟ್ ತಿರಸ್ಕರಿಸಿತ್ತು.

ವಿಚಾರಣೆಯ ಬಳಿಕ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ತೀರ್ಮಾನಿಸಲಿ ಎಂದು ಅಭಿಪ್ರಾಯಪಟ್ಟಿತ್ತು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್‌ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಯತ್ನಾಳ್, ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಈಗಾಗಲೇ ಕೇವಿಯಟ್ ಸಲ್ಲಿಸಿದ್ದಾರೆ.

RELATED ARTICLES
- Advertisment -
Google search engine

Most Popular