Monday, April 7, 2025
Google search engine

Homeಅಪರಾಧಅಕ್ರಮವಾಗಿ ಗಾಂಜಾ ಮಾರಾಟ: ಆರೋಪಿ ಬಂಧನ

ಅಕ್ರಮವಾಗಿ ಗಾಂಜಾ ಮಾರಾಟ: ಆರೋಪಿ ಬಂಧನ

ಮಂಡ್ಯ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ತಾಲೂಕಿನ ಹೊಸಹಳ್ಳಿ ಮೂಲದ ಎಚ್.ಸಿ. ಭರತ್ ಬಂಧಿತ ಆರೋಪಿ.

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಹೊಸಗಾವಿ ಗ್ರಾಮದ ಶ್ರೀ ಮಹದೇಶ್ವರ ದೇವಸ್ಥಾನದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿರುವ ಕುರಿತು ತಿಳಿದುಬಂದ ಖಚಿತ ಮಾಹಿತಿ ಮೆರೆಗೆ ಮದ್ದೂರು ಅಬಕಾರಿ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನಿಂದ 310 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ವಿರುದ್ಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿರುವ ಪೊಲೀಸರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿದ್ದಾರೆ.

RELATED ARTICLES
- Advertisment -
Google search engine

Most Popular