Friday, April 11, 2025
Google search engine

Homeಅಪರಾಧಅಕ್ರಮ ಮರಳು ಸಂಗ್ರಹಿಸಿ ಸಾಗಾಟ :ಆರೋಪಿಗಳು ಪರಾರಿ

ಅಕ್ರಮ ಮರಳು ಸಂಗ್ರಹಿಸಿ ಸಾಗಾಟ :ಆರೋಪಿಗಳು ಪರಾರಿ

ಮಂಗಳೂರು (ದಕ್ಷಿಣ ಕನ್ನಡ): ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಪೊಲೀಸ್ರು ದಾಳಿ ಮಾಡಿ ಎರಡು ಟಿಪ್ಪರ್ ಲಾರಿಗಳ‌ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ತಾಲೂಕಿನ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ (ಪಲ್ಗುಣಿ) ನದಿಯಲ್ಲಿ ನಡೆದಿದೆ.
ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಪೊಲೀಸರು ಈ ಕಾರ್ಯಾಚರಣೆ‌ ಕೈಗೊಂಡಿದ್ದಾರೆ.
ಕಾರ್ಯಾಚರಣೆಯ ವೇಳೆ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ತಲಾ 5 ಲಕ್ಷ ರೂ. ಮೌಲ್ಯದ ಎರಡು ಟಿಪ್ಪರ್ ಲಾರಿಗಳು, ತಲಾ 50 ಸಾವಿರ ರೂ. ಮೌಲ್ಯದ 15 ದೋಣಿಗಳು ಹಾಗೂ ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ ಸೊತ್ತು ಗಳು ಸೇರಿ ಒಟ್ಟು 17.50 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ ಗೋಯೆಲ್ ಅವರ ನೇತ್ರತ್ವದಲ್ಲಿ ಬಜ್ಪೆ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular