Monday, September 8, 2025
Google search engine

Homeಅಪರಾಧಯಾದಗಿರಿಯಲ್ಲಿ ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ಬಯಲು: 6000 ಟನ್ ಅಕ್ಕಿ ಜಪ್ತಿ

ಯಾದಗಿರಿಯಲ್ಲಿ ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟ ಬಯಲು: 6000 ಟನ್ ಅಕ್ಕಿ ಜಪ್ತಿ

ಯಾದಗಿರಿ : ಅನ್ನಭಾಗ್ಯದ ಅಕ್ಕಿ ಅಕ್ರಮ ಸಾಗಾಟದ ಜಾಲ ಪತ್ತೆಯಾಗಿದೆ.ಯಾದಗಿರಿಯಿಂದ ಫಾರಿನ್ ಗೆ ಕಳುಹಿಸಲಾಗುತ್ತಿದ್ದ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ.

ಆಹಾರ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದು, 6000 ಟನ್ ಅಕ್ಕಿ ಜಪ್ತಿ ಮಾಡಿಕೊಂಡಿದ್ದಾರೆ. ಕಳೆದ ಯಾದಗಿರಿ ಜಿಲ್ಲೆ ಗುರುಮಠಕಲ್ನ ಶ್ರೀ ಲಕ್ಷ್ಮೀ ವೆಂಕಟೇಶ್ವರ ಇಂಡಸ್ಟ್ರೀಸ್ ಮೇಲೆ ದಾಳಿ ನಡೆಸಿ ಪ್ರಮಾಣ ದಲ್ಲಿ ಸರ್ಕಾರದ ‘ಅನ್ನಭಾಗ್ಯ’ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಬಿಪಿಎಲ್ , ಎಪಿಎಲ್ ಕಾರ್ಡ್ ದಾರರಿಗೆ ವಿತರಿಸುತ್ತಿದ್ದ ಅಕ್ಕಿಯನ್ನು ಪಾಲಿಶ್ ಮಾಡಿ ದುಬೈ, ಫ್ರಾನ್ಸ್ ದೇಶಗಳಿಗೆ ರಫ್ತು ಮಾಡಲಾಗುತ್ತಿತ್ತು. ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಸುಮಾರು 6000 ಟನ್ ಅಕ್ಕಿ ಸೀಜ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಯಾದಗಿರಿ ಜಿಲ್ಲೆಯ ಹಲವು ಕಡೆಯಿಂದ ಅಕ್ಕಿ ಸಂಗ್ರಹಿಸಿ ಪಾಲಿಶ್ ಮಾಡಿ ಅದಕ್ಕೊಂದು ಬ್ರ್ಯಾಂಡ್ ಹೆಸರು ಕೊಟ್ಟು ದುಬೈ, ಫ್ರಾನ್ಸ್ ಇನ್ನಿತರ ರಾಷ್ಟ್ರಗಳಿಗೆ ಕಳುಹಿಸಲು ಸಂಚು ರೂಪಿಸಲಾಗುತ್ತಿತ್ತು. ಹೊರ ದೇಶದಲ್ಲಿ ಅಕ್ಕಿಗೆ ಭಾರಿ ರೇಟ್ ಇದೆ. ಒಳ್ಳೆ ಗುಣಮಟ್ಟದ ಅಕ್ಕಿ ಎಂದು ಅಲ್ಲಿ ಮಾರಾಟ ಮಾಡಿ ಹಣ ಮಾಡುವ ದಂಧೆ ನಡೆಯುತ್ತಿತ್ತು ಎನ್ನಲಾಗಿದೆ.

ಕಳೆದ ಹಲವು ದಿನಗಳಿಂದ ದಂಧೆ ನಡೆಯುತ್ತಿದ್ಧ ಬಗ್ಗೆ ಅನೇಕ ದೂರುಗಳು ಬಂದಿದ್ವು. ಅಧಿಕಾರಿಗಳು ಪ್ಲಾನ್ ಮಾಡಿ ದಾಳಿ ನಡೆಸಿ ಅಕ್ಕಿಯನ್ನು ಸೀಜ್ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular