Monday, April 21, 2025
Google search engine

Homeಅಪರಾಧಅನಾರೋಗ್ಯ:ಯುವ ಕಲಾವಿದ ಆತ್ಮಹತ್ಯೆ

ಅನಾರೋಗ್ಯ:ಯುವ ಕಲಾವಿದ ಆತ್ಮಹತ್ಯೆ

ಮಂಗಳೂರು(ದಕ್ಷಿಣ ಕನ್ನಡ): ಬಾವಿಗೆ ಹಾರಿ ಯುವ ಕಲಾವಿದ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮದ ಮಿತ್ತಮಜಲು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಿತ್ತಮಜಲು ನಿವಾಸಿ ಚಿತ್ರ ಕಲಾವಿದ ಸಾಗರ್ ಆಚಾರ್ಯ ಎಂದು ಗುರುತಿಸಲಾಗಿದೆ. ಮನೆಯಂಗಳದಲ್ಲಿ ಇರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ಜೀವನದಲ್ಲಿ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಸಾಗರ್ ಕಳೆದ ಎರಡು ವರ್ಷಗಳ ಹಿಂದೆ ಬಿಸಿರೋಡಿನ ಸಿ.ಡಿ.ಪಿ.ಒ. ಕಚೇರಿಯಲ್ಲಿ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಮೊದಲೇ ಇದ್ದ ಕಿಡ್ನಿ ಸಮಸ್ಯೆ ಉಲ್ಬಣಗೊಂಡಿತು. ಹೀಗಾಗಿ ಕೆಲಸ ಬಿಟ್ಟು ಮನೆಯಲ್ಲೇ ಇದ್ದರು. ಎರಡೂ ಕಿಡ್ನಿಗಳು ವೈಫಲ್ಯ ಕಂಡ ಹಿನ್ನೆಲೆಯಲ್ಲಿ ಈತನ ತಂದೆಯ ಒಂದು ಕಿಡ್ನಿಯನ್ನು ನೀಡಲಾಗಿತ್ತು. ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಲಾಗುತ್ತಿತ್ತು.

RELATED ARTICLES
- Advertisment -
Google search engine

Most Popular