Friday, April 4, 2025
Google search engine

Homeರಾಜ್ಯಸುದ್ದಿಜಾಲನಾನು ಧರ್ಮ ವಿರೋಧಿಯಲ್ಲ, ಧಾರ್ಮಿಕ ವಿಚಾರದಲ್ಲೂ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ: ನಟ ಪ್ರಕಾಶ್ ರಾಜ್

ನಾನು ಧರ್ಮ ವಿರೋಧಿಯಲ್ಲ, ಧಾರ್ಮಿಕ ವಿಚಾರದಲ್ಲೂ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ: ನಟ ಪ್ರಕಾಶ್ ರಾಜ್

ಮಂಗಳೂರು (ದಕ್ಷಿಣ ಕನ್ನಡ): ನಾನು ಕುಂಭ ಮೇಳಕ್ಕೆ ಹೋಗದಿರುವುದು ನನ್ನ ನಂಬಿಕೆಯ ವಿಚಾರ. ನಾನು ಧರ್ಮ ವಿರೋಧಿಯಲ್ಲ. ಆದರೆ ನನ್ನ ನಂಬಿಕೆಯನ್ನು ಎಐ ತಂತ್ರಜ್ಞಾನ ಬಳಸಿಕೊಂಡು ಧಾರ್ಮಿಕ ವಿಚಾರದಲ್ಲೂ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ ಎಂದು ನಟ ಪ್ರಕಾಶ್ ರಾಜ್ ಪ್ರತಿಕ್ರಿಯಿಸಿದ್ದಾರೆ.

ಮಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕುಂಭ ಮೇಳಕ್ಕೆ ಹೋಗುವುದು ಅವರವರ ನಂಬಿಕೆ. ಆದರೆ ನಾನು ಹೋಗದ್ದನ್ನೇ ವಿಚಾರವಾಗಿಸಿ, ಒಬ್ಬ ವ್ಯಕ್ತಿಯ ಇಚ್ಛೆಗೆ ವಿರುದ್ಧವಾಗಿ ಆತನ ಫೋಟೋವನ್ನು ದುರ್ಬಳಕೆ ಮಾಡಿಕೊಂಡು ಎಐ ನಂತಹ ತಂತ್ರಜ್ಞಾನವನ್ನು ದುರ್ಬಳಕೆ ಮಾಡುವುದು ಅಕ್ಷಮ್ಯ ಅಪರಾಧ. ಈ ರೀತಿ ತಪ್ಪು ಕಲ್ಪನೆ ಹರಡುವ ಕೆಲಸವನ್ನು ಪ್ರಶಾಂತ್ ಸಂಬರ್ಗಿಅಂಥವರು ಮಾಡುತ್ತಿದ್ದಾರೆ. ಅದನ್ನು ಪ್ರಶ್ನಿಸುವುದಕ್ಕಾಗಿ ಕೇಸ್ ದಾಖಲಿಸಲಾಗಿದೆ ಎಂದವರು ಹೇಳಿದರು.

RELATED ARTICLES
- Advertisment -
Google search engine

Most Popular