Saturday, April 19, 2025
Google search engine

Homeರಾಜ್ಯಕೃಷಿಗೆ ಹೆಚ್ಚಿನ ಉತ್ತೇಜನ ನೀಡಲು ‘ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ’

ಕೃಷಿಗೆ ಹೆಚ್ಚಿನ ಉತ್ತೇಜನ ನೀಡಲು ‘ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ’

ಬೆಂಗಳೂರು: ಹದಿನೈದನೇ ಬಾರಿಗೆ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಕೃಷಿಗೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಸಿಎಂ ಕೃಷಿ ಕ್ಷೇತ್ರವನ್ನು ಸುಸ್ಥಿರ ಹಾಗೂ ಲಾಭದಾಯಕವಾಗಿಸುವುದು ನಮ್ಮ ಸರ್ಕಾರದ ಆದ್ಯತೆಯ ವಿಷಯವಾಗಿದ್ದು, ಈ ಉದ್ದೇಶದಿಂದ ವಿವಿಧ ರೈತಪರ ಯೋಜನೆಗಳನ್ನು ಒಗ್ಗೂಡಿಸಿ, ಸಮಗ್ರ ಕೃಷಿಯನ್ನು ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಈ ಯೋಜನೆಯಡಿ ರೈತರಿಗೆ ಕೆಲ ವಿಷಯಗಳ ಬಗ್ಗೆ ಮಾರ್ಗದರ್ಶನ ಜೊತೆಗೆ ಬೆಂಬಲ ನೀಡಲು ಸರಕಾರ ಕ್ರಮ ಕೈಗೊಂಡಿದೆ.

ಅವುಗಳೆಂದರೆ:

– ಕೃಷಿ, ಪಶುಸಂಗೋಪನೆ, ತೋಟಗಾರಿಕೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಯನ್ನು ಕಂಡುಕೊಳ್ಳಲು ಬೆಂಬಲ ನೀಡುವುದು.

– ಮಣ್ಣಿನ ಗುಣ ಹಾಗೂ ಮಾರುಕಟ್ಟೆ ಬೇಡಿಕೆಯನ್ನು ಆಧರಿಸಿ ಯಾವ ಬೆಳೆ ಬೆಳೆಯಬೇಕೆಂಬ ಕುರಿತು ರೈತರಿಗೆ ಮಾರ್ಗದರ್ಶನ ನೀಡುವುದು.

– ಮಣ್ಣು ಪರೀಕ್ಷೆ ಮತ್ತು ಗುಣಮಟ್ಟ ಕುರಿತು ಮಾಹಿತಿ ನೀಡುವುದು.

– ಹೊಸ ಕೃಷಿ ಪದ್ಧತಿ ಹಾಗೂ ತಂತ್ರಜ್ಞಾನಗಳ ಕುರಿತು ರೈತರಿಗೆ ಅರಿವು ಮೂಡಿಸಿ, ಬೆಂಬಲ ನೀಡುವುದು.

ರೈತರಿಗೆ ಸಂಗ್ರಹಣೆ ಮತ್ತು ಮೌಲ್ಯವರ್ಧನೆಯ ಕುರಿತು ಅರಿವು ಮೂಡಿಸುವುದು.

ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಪಡೆಯಲು ಮಾರುಕಟ್ಟೆ ಸಂಪರ್ಕ ಕಲ್ಪಿಸುವುದು ಸೇರಿದೆ.

ಜೊತೆಗೆ ಅತ್ಯಂತ ಜನಪ್ರಿಯವಾಗಿದ್ದ ಕೃಷಿ ಭಾಗ್ಯ ಯೋಜನೆಯನ್ನು ಮರುಜಾರಿಗೊಳಿಸಲಾಗಿರುತ್ತದೆ. 2023-24ನೇ ಸಾಲಿನಲ್ಲಿ 200 ಕೋಟಿ ರೂ.ಗಳ ಅನುದಾನ ಒದಗಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿಯೂ ಈ ಯೋಜನೆಯನ್ನು ಮುಂದುವರೆಸಲಾಗುವುದು ಎಂದು ಹೇಳಿದರು.

ಕಣ್ಮರೆಯಾಗುತ್ತಿರುವ ಹಾಗೂ ನಶಿಸಿ ಹೋಗುತ್ತಿರುವ ಸ್ಥಳೀಯ ಬೆಳೆಗಳ ತಳಿಗಳನ್ನು ಸಂಗ್ರಹಿಸಲು ಮತ್ತು ಸಂರಕ್ಷಿಸುವ ಉದ್ದೇಶದಿಂದ ಒಂದು ಸಮುದಾಯ ಬೀಜ ಬ್ಯಾಂಕ್ ಅನ್ನು ಸ್ಥಾಪಿಸಲಾಗುವುದು ಎಂದರು.

RELATED ARTICLES
- Advertisment -
Google search engine

Most Popular