Friday, December 12, 2025
Google search engine

Homeರಾಜ್ಯಸುದ್ದಿಜಾಲಪೊಲೀಸ್, ಅರಣ್ಯ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಮೀಸಲಾತಿ ಜಾರಿಗೆ- ಸಿಎಂ ಸಿದ್ದರಾಮಯ್ಯ.

ಪೊಲೀಸ್, ಅರಣ್ಯ ಇಲಾಖೆಗಳಲ್ಲಿ ಕ್ರೀಡಾ ಪಟುಗಳಿಗೆ ಮೀಸಲಾತಿ ಜಾರಿಗೆ- ಸಿಎಂ ಸಿದ್ದರಾಮಯ್ಯ.

ವರದಿ :ಸ್ಟೀಫನ್ ಜೇಮ್ಸ್.

ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ 13 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೇಮಕಾತಿ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಳಗಾವಿ: ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಅರಣ್ಯ, ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಮೀಸಲಾತಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ವಿಧಾನಪರಿಷತ್ತಿನಲ್ಲಿ ಘೋಷಿಸಿದರು.

ಪರಿಷತ್ ಸದಸ್ಯ ಐವನ್ ಡಿಸೋಜ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಅರಣ್ಯ ಇಲಾಖೆಯಲ್ಲಿ ಶೇ 3, ಪೊಲೀಸ್ ಇಲಾಖೆಯಲ್ಲಿ ಶೇ. 3 ಮತ್ತಿತರ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲು ಜಾರಿಗೊಳಿಸುವುದಾಗಿ ತಿಳಿಸಿದರು.

ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ 13 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೇಮಕಾತಿ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಪೊಲೀಸ್ ಇಲಾಖೆಯಲ್ಲಿ 70 ಕಾನ್‌ಸ್ಟೆಬಲ್‌ಗಳು ಮತ್ತು 14 ಪಿಎಸ್‌ಐಗಳಿಗೆ ನೇರ ನೇಮಕಾತಿ ಮಾಡಲಾಗಿದೆ. ಜೊತೆಗೆ ಅರಣ್ಯ ಇಲಾಖೆಯಲ್ಲಿ ಶೇ.3, ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡುವ ಮೂಲಕ ಕ್ರೀಡಾ ಪಟುಗಳಿಗೆ ಉತ್ತೇಜನ ನೀಡಲಾಗುವುದು ಎಂದರು.

ಕಬಡ್ಡಿ ಕ್ರೀಡೆಯನ್ನು ಮತ್ತಷ್ಟು ಬೆಂಬಲಿಸುವ ಕ್ರಮಗಳನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

RELATED ARTICLES
- Advertisment -
Google search engine

Most Popular