Friday, April 11, 2025
Google search engine

HomeUncategorizedರಾಷ್ಟ್ರೀಯದೆಹಲಿಯಲ್ಲಿ ನಡುರಸ್ತೆಯಲ್ಲೇ ಕಾರು ಅಡ್ಡಗಟ್ಟಿ ದರೋಡೆ

ದೆಹಲಿಯಲ್ಲಿ ನಡುರಸ್ತೆಯಲ್ಲೇ ಕಾರು ಅಡ್ಡಗಟ್ಟಿ ದರೋಡೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ, ಬೆದರಿಸಿ ದರೋಡೆ ಮಾಡಿರುವ ಘಟನೆ ವರದಿಯಾಗಿದೆ.

ಇಂಡಿಯಾ ಗೇಟ್‌ನಿಂದ ರಿಂಗ್ ರೋಡ್‌ಗೆ ಸಂಪರ್ಕ ಕಲ್ಪಿಸುವ ಪ್ರಗತಿ ಮೈದಾನದ ಸುರಂಗ ಬೈಕ್‌ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಗನ್ ತೋರಿಸಿ ಕಾರಿನಲ್ಲಿದ್ದ ಡೆಲಿವರಿ ಏಜೆಂಟ್‌ ನ ಬ್ಯಾಗ್ ದೋಚಿ ಪರಾರಿಯಾಗಿದ್ದಾರೆ.

ಪಟೇಲ್ ಸಾಜನ್ ಕುಮಾರ್ ಹಣ ಕಳೆದುಕೊಂಡ ವ್ಯಕ್ತಿಯಾಗಿದ್ದು, ಅವರು ಚಾಂದಿನಿ ಚೌಕ್‌ನಲ್ಲಿರುವ ಓಮಿಯಾ ಎಂಟರ್‌ ಪ್ರೈಸಸ್‌ ನಲ್ಲಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದರು. ತನ್ನ ಸ್ನೇಹಿತ ಜಿಗರ್ ಪಟೇಲ್ ಜೊತೆ ಸೇರಿ ಶನಿವಾರ ಸಂಜೆ ಗುರುಗ್ರಾಮಕ್ಕೆ 2 ಲಕ್ಷ ರೂ. ನೀಡಲು ಹೋಗುತ್ತಿದ್ದರು.

ರಿಂಗ್ ರಸ್ತೆಯಿಂದ ಪ್ರಗತಿ ಮೈದಾನದ ಸುರಂಗ ಮಾರ್ಗ ಪ್ರವೇಶಿಸಿ ಸ್ವಲ್ಪ ದೂರ ಸಾಗುತ್ತಿದ್ದಾಗ 2 ಬೈಕ್‌ ಗಳಲ್ಲಿ ಬಂದ ದುಷ್ಕರ್ಮಿಗಳು ಗನ್ ತೋರಿಸಿ ಬಲವಂತವಾಗಿ ಕ್ಯಾಬ್ ತಡೆದಿದ್ದಾರೆ. ಬಳಿಕ ನಗದು ತುಂಬಿದ್ದ ಬ್ಯಾಗ್ ಅನ್ನು ದೋಚಿ, ಪರಾರಿಯಾಗಿದ್ದಾರೆ.

ಪಟೇಲ್ ಸಾಜನ್ ಕುಮಾರ್ ದೂರಿನ ಮೇರೆಗೆ ತಿಲಕ್ ಮಾರ್ಗ್ ಠಾಣೆ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 397 ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈವರೆಗೂ ದುಷ್ಕರ್ಮಿಗಳ ಸುಳಿವು ಪತ್ತೆಯಾಗಿಲ್ಲ. ಈ ನಡುವೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದರೋಡೆ ಪ್ರಕರಣದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ನಡುವೆ ಘಟನೆಗೆ ಕಿಡಿಕಾರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು, ರಾಷ್ಟ್ರ ರಾಜಧಾನಿಯಲ್ಲಿ ಅಪರಾಧ ಹೆಚ್ಚಳವಾಗಿದ್ದು, ಲೆಫ್ಟಿನೆಂಟ್ ಗವರ್ನರ್ ವಿಕೆ.ಸಕ್ಸೇನಾ ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ದೆಹಲಿಯ ನಿವಾಸಿಗಳ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವ ವ್ಯಕ್ತಿಗಳಿಗೆ ಸಕ್ಸೇನಾ ದಾರಿ ಮಾಡಿಕೊಡಬೇಕು. ಎಎಪಿ ನೇತೃತ್ವದ ಸರ್ಕಾರಕ್ಕೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಹಸ್ತಾಂತರಿಸಬೇಕೆಂದು ಒತ್ತಾಯಿಸಿದ್ದಾರೆ.

ಎಲ್‌ ಜಿ ರಾಜೀನಾಮೆ ಕೊಡಲಿ. ದೆಹಲಿಯ ಜನರಿಗೆ ಸುರಕ್ಷತೆ ಮತ್ತು ಭದ್ರತೆಯನ್ನು ಒದಗಿಸುವ ಯಾರಿಗಾದರೂ ದಾರಿ ಮಾಡಿಕೊಡಿ. ದೆಹಲಿಯನ್ನು ಸುರಕ್ಷಿತವಾಗಿಡಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಅದನ್ನು ನಮಗೆ ಒಪ್ಪಿಸಿ. ನಗರವನ್ನು ಅದರ ನಾಗರಿಕರಿಗೆ ಹೇಗೆ ಸುರಕ್ಷಿತವಾಗಿಸುವುದು ನಾವು ನಿಮಗೆ ತೋರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular