Sunday, January 11, 2026
Google search engine

Homeಸ್ಥಳೀಯಮಂಡ್ಯ ಜಿಲ್ಲೆಯಲ್ಲಿ ಹುಲ್ಲಿನ ಮೆದೆ ಬೆಂಕಿಗೆ ಆಹುತಿ

ಮಂಡ್ಯ ಜಿಲ್ಲೆಯಲ್ಲಿ ಹುಲ್ಲಿನ ಮೆದೆ ಬೆಂಕಿಗೆ ಆಹುತಿ

ಮಂಡ್ಯ: ಜಾನುವಾರುಗಳ ಮೇವಿಗಾಗಿ ಸಂಗ್ರಹಿಸಿದ್ದ ಭತ್ತದ ಒಣ ಹುಲ್ಲಿನ ಮೆದೆಗೆ ಬೆಂಕಿ ತಗುಲಿದ ಪರಿಣಾಮ ಇಡೀ ಮೆದೆ ಸುಟ್ಟು ಭಸ್ಮವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ.

ಅಕ್ಕಿಹೆಬ್ಬಾಳು ಗ್ರಾಮದ ಶ್ರೀನಿವಾಸ್ ಎಂಬುವವರು ಜಾನುವಾರುಗಳಿಗೆ ಮೇವು ಸಂಗ್ರಹ ಮಾಡಲು 1 ಲಕ್ಷ ರೂಪಾಯಿ ನೀಡಿ ಭತ್ತದ ಒಣ ಹುಲ್ಲನ್ನು ಖರೀದಿ ಮಾಡಿದ್ದರು. ಬಳಿಕ ಆ ಹುಲ್ಲನ್ನ ಮನೆಯ ಸಮೀಪ ಮೆದೆ ನಿರ್ಮಾಣ ಮಾಡಿ ಸಂಗ್ರಹಿಸಿದ್ದರು. ಕಳೆದ ರಾತ್ರಿ ಇದ್ದಕ್ಕಿದ್ದಂತೆ ಹುಲ್ಲಿನ ಮೆದೆಗೆ ಬೆಂಕಿ ಬಿದ್ದಿದೆ. 

ಕ್ಷಣಾರ್ಧದಲ್ಲಿ ಬೆಂಕಿಯ ಕಿನ್ನಾಲೆಗೆ ಇಡೀ ಹುಲ್ಲಿನ ಮೆದೆ ಸುಟ್ಟು ಕರಕಲಾಗಿದೆ. ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದರು ಸಹ ಯಾವುದೇ ಪ್ರಯೋಜನವಾಗಿಲ್ಲ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular