Friday, April 18, 2025
Google search engine

Homeರಾಜ್ಯಖಾಸಗಿ ಕಂಪನಿಗಳಲ್ಲಿ ಶೇ. 50-75ರಷ್ಟು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ಸಂಪುಟ ಅನುಮೋದನೆ

ಖಾಸಗಿ ಕಂಪನಿಗಳಲ್ಲಿ ಶೇ. 50-75ರಷ್ಟು ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ಸಂಪುಟ ಅನುಮೋದನೆ

ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಈ ಬಗ್ಗೆ ಸಂದೇಶ ಪ್ರಕಟಿಸಿರುವ ಅವರು, ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು‌ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳಲು ಖುಷಿಯಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ.

ಈ ವಿಧೇಯಕದ ಜಾರಿಯಿಂದ ರಾಜ್ಯದಲ್ಲಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಂತೋಷ್ ಲಾಡ್ ಎಕ್ಸ್ ಸಂದೇಶ

ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು‌ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳಲು ಖುಷಿಯಾಗುತ್ತಿದೆ.

ಈ ವಿಧೇಯಕದ ಜಾರಿಯಿಂದ ರಾಜ್ಯದಲ್ಲಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ಸಿಗಲಿದೆ.…

ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾದ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬ ಖುಷಿಯಾಗುತ್ತಿದೆ. ಈ ವಿಧೇಯಕದಿಂದ ಶೇ 50 ರಷ್ಟು ಮ್ಯಾನೇಜ್ ಮೆಂಟ್ ಹುದ್ದೆಗಳು ಹಾಗೂ ಶೇ 75 ರಷ್ಟು ನಾನ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಸ್ಥಳಿಯರಿಗೆ ಮೀಸಲಾತಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಮೀಸಲಾತಿಗೆ ಯಾರು ಅರ್ಹರು?

ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷಗಳಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತಾಡಲು, ಓದಲು ಹಾಗೂ ಬರೆಯಲು ಬರುವವರು ಅಲ್ಲದೇ ನೋಡಲ್ ಏಜೆನ್ಸಿಗಳು ನಡೆಸುವ ಕನ್ನಡ ಭಾಷಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವವರು ಈ ಮೀಸಲಾತಿಗೆ ಅರ್ಹರಿರಲಿದ್ದಾರೆ.

ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ನಿಯಮವನ್ನು ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ ವಿಧಿಸುವ ಅಂಶವನ್ನು ಸಹ ವಿಧೇಯಕದಲ್ಲಿ ಸೇರಿಸಲಾಗಿದ್ದು, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular