Sunday, April 20, 2025
Google search engine

Homeರಾಜ್ಯರಾಜಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ತೀವ್ರ ಪೈಪೋಟಿ

ರಾಜಸ್ಥಾನದಲ್ಲಿ ಕಾಂಗ್ರೆಸ್, ಬಿಜೆಪಿ ತೀವ್ರ ಪೈಪೋಟಿ

ರಾಜಸ್ಥಾನ: ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಆರಂಭದ ಮತ ಎಣಿಕೆ ಪ್ರಕಾರ ಕಾಂಗ್ರೆಸ್ ಮತ್ತು ಬಿಜೆಪಿ ನೇರಾ ನೇರ ಪೈಪೋಟಿ ನೀಡುತ್ತಿದೆ. ಕಾಂಗ್ರೆಸ್ ೮೦ ಮತ್ತು ಬಿಜೆಪಿ ೯೫ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಒಟ್ಟು ೧,೮೬೨ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕರಣಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನಾರ್ ನಿಧನದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ಮತಎಣಿಕೆ ಕೇಂದ್ರಗಳಲ್ಲಿ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದೆ
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಡಿಸಿಎಂ ಸಚಿನ್ ಪೈಲಟ್ ಮತ್ತು ಮಾಜಿ ಸಿಎಂ ವಸುಂಧರಾ ರಾಜೇ ಅವರ ಭವಿಷ್ಯ ಸಂಜೆಯೊಳಗೆ ನಿರ್ಧಾರವಾಗಲಿದೆ.
೨೦೧೮ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದಿಂದ ಗೆದ್ದು ವಸುಂಧರಾ ರಾಜೇ ಸರ್ಕಾರವನ್ನು ಅಂತ್ಯಗೊಳಿಸಿತು. ಅಶೋಕ್ ಗೆಹ್ಲೋಟ್ ಅವರು ಮುಖ್ಯಮಂತ್ರಿಯಾದರು ಮತ್ತು ಸಚಿನ್ ಪೈಲಟ್ ಅವರು ಉಪಮುಖ್ಯಮಂತ್ರಿಯಾದರು. ಇಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳಲಿರುವ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ತನ್ನ ಶಾಸಕಾಂಗ ಪಕ್ಷದ ಸಭೆಗಳನ್ನು ಸಂಘಟಿಸಲು ವೀಕ್ಷಕರನ್ನು ನೇಮಿಸಿದೆ. ರಾಜಸ್ಥಾನದಲ್ಲಿ ಪಕ್ಷವು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಮಧುಸೂದನ್ ಮಿಸ್ತ್ರಿ, ಮುಕುಲ್ ವಾಸ್ನಿಕ್ ಮತ್ತು ಶಕೀಲ್ ಅಹ್ಮದ್ ಖಾನ್ ಅವರನ್ನು ಎಐಸಿಸಿ ವೀಕ್ಷಕರನ್ನಾಗಿ ನೇಮಿಸಿದೆ.

RELATED ARTICLES
- Advertisment -
Google search engine

Most Popular