Friday, April 18, 2025
Google search engine

Homeರಾಜಕೀಯಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನನಗೆ ಟಿಕೆಟ್ ತಪ್ಪಿಸಲು ನಮ್ಮವರಿಂದಲೇ ಪಿತೂರಿ: ಶೋಭಾ ಕರಂದ್ಲಾಜೆ

ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ನನಗೆ ಟಿಕೆಟ್ ತಪ್ಪಿಸಲು ನಮ್ಮವರಿಂದಲೇ ಪಿತೂರಿ: ಶೋಭಾ ಕರಂದ್ಲಾಜೆ

ಬೆಳಗಾವಿ: ಲೋಕಸಭೆ ಚುನಾವಣೆಯ ಟಿಕೆಟ್ ತಪ್ಪಿಸಲು ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವಗ ವಿರೋಧ ವ್ಯಕ್ತವಾಗುತ್ತದೆಯೋ ಆಗಲೇ ನಮ್ಮ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ಕೆಲಸ ಮಾಡ್ತಿದ್ದಾರೆ, ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ಹೇಳುತ್ತಿದ್ದರು ಎಂದು ಹೇಳಿದ್ದಾರೆ.

ಶೋಭಾರನ್ನು ಏಕೆ ವಿರೋಧ ಮಾಡ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಕಲೆ ಹಾಕ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಏನೆಂಬುದು ಗೊತ್ತಾಗುತ್ತವೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ. ಅದಕ್ಕಾಗಿ ನಮ್ಮ ಹೈಕಮಾಂಡ್ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ ಎಂದು ಶೋಭಾ ಭರವಸೆ ವ್ಯಕ್ತಪಡಿಸಿದ್ದಾರೆ.

ಟಿಕೆಟ್ ಕೊಡುವ ಬಗ್ಗೆ ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ, ನಮ್ಮ ಕೇಂದ್ರ ಚುನಾವಣೆ ಮಂಡಳಿ ಇದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭ ಏನು ಎಂಬುದರ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಯಾರಿಗೆಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತದೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆಂಬುದನ್ನು ಪ್ರಧಾನಿಯೂ ಹೇಳಿಲ್ಲ, ನಡ್ಡಾ ಅವರೂ ಹೇಳಿಲ್ಲ, ಶಾ ಕೂಡ ಹೇಳಿಲ್ಲ. ಇವೆಲ್ಲ ಊಹಾಪೋಹ ಎನಿಸುತ್ತದೆ, ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ, ಆಗ ಸತ್ಯ ಹೊರಬರುತ್ತದೆ ಎಂದು ಶೋಭಾ ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular