ಚಾಮರಾಜನಗರ: ಕರ್ನಾಟಕ ಗಮಕ ಕಲಾ ಪರಿಷತ್ತು (ರಿ) ಬೆಂಗಳೂರು, ಚಾಮರಾಜನಗರ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಹಾಗೂ ಗಮಕ ಕಾರ್ಯಕ್ರಮವನ್ನು ಫೆಬ್ರವರಿ 17 ರ ಸೋಮವಾರ ಸಂಜೆ 6:00ಗೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಪ್ರಕಾಶ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ದಿವ್ಯಸಾನಿಧ್ಯವನ್ನು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ರಾಜಯೋಗಿನಿ ಬಿಕೆ ದಾನೇಶ್ವರಿ ಅಕ್ಕರವರು ವಹಿಸಲಿದ್ದಾರೆ. ಉದ್ಘಾಟನೆಯನ್ನು ಮೈಸೂರಿನ ಹಿರಿಯ ಗಮಕಿಗಳು ಕುಮಾರವ್ಯಾಸ ಪ್ರಶಸ್ತಿ ಪುರಸ್ಕೃತರಾದ ಶ್ರೀ ಗಮಕ ರತ್ನಾಕರ ರಾಮಚಂದ್ರ ನೆರೆವೇರಿಸುವರು.
ಅಧ್ಯಕ್ಷತೆಯನ್ನು ಚಾಮರಾಜನಗರ ಕರ್ನಾಟಕ ಗಮಕ ಕಲಾ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ವಹಿಸುವರು.
ಮುಖ್ಯ ಅತಿಥಿಗಳಾಗಿ ಹಾಗು ಕಾವ್ಯವಚನವನ್ನು ಮೈಸೂರಿನ ಗಮಕಿ ಹಾಗೂ ಕರ್ನಾಟಕ ಗಮಕ ಕಲಾಪರಿಷತ್ತಿನ ಸಂಘ ಸಂಸ್ಥೆಗಳ ಪ್ರತಿನಿಧಿ ಡಾ. ಎ ನಿರಂಜನ್ ಹಾಗೂ ಮೈಸೂರಿನ ಶ್ರೀಮತಿ ದರಿತ್ರಿ ಆನಂದ ರಾವ್ ರವರು ನೆರವೇರಿಸಲಿದ್ದಾರೆ .
ಮುಖ್ಯ ಅತಿಥಿಗಳಾಗಿ ಶ್ರೀ ಭಗವದ್ಗೀತಾ ಅಭಿಯಾನ ಸಮಿತಿಯ ಗೌರವ ಅಧ್ಯಕ್ಷರಾದ ಜಿಎಂ ಹೆಗಡೆ ,ಭಾರತ ಸೇವಾದಳದ ಜಿಲ್ಲಾಧ್ಯಕ್ಷರಾದ ವೆಂಕಟನಾಗಪ್ಪ ಶೆಟ್ಟಿ ಆಗಮಿಸಲಿದ್ದಾರೆ. ಸರ್ವರು ಆಗಮಿಸಿ ಯಶಸ್ವಿಗೊಳಿಸಿಕೊಡಬೇಕೆಂದು ಪ್ರಕಟಣೆ ಕೋರಿದೆ.