Friday, April 4, 2025
Google search engine

HomeUncategorizedರಾಷ್ಟ್ರೀಯಕಾಂಗ್ರೆಸ್ ನೂತನ ಪ್ರಧಾನ ಕಚೇರಿ ಉದ್ಘಾಟಿಸಿದ ಸೋನಿಯಾ ಗಾಂಧಿ

ಕಾಂಗ್ರೆಸ್ ನೂತನ ಪ್ರಧಾನ ಕಚೇರಿ ಉದ್ಘಾಟಿಸಿದ ಸೋನಿಯಾ ಗಾಂಧಿ

ನವದೆಹಲಿ: ದೆಹಲಿಯ ಕೋಟ್ಲಾ ರಸ್ತೆಯ 9ಎ ನಲ್ಲಿ ನಿರ್ಮಿಸಲಾಗಿರುವ ಕಾಂಗ್ರೆಸ್ ಪಕ್ಷದ ನೂತನ ಮುಖ್ಯ ಕಚೇರಿ ‘ಇಂದಿರಾ ಗಾಂಧಿ ಭವನ’ವನ್ನು ಬುಧವಾರ ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಉದ್ಘಾಟಿಸಿದರು. ಆ ಮೂಲಕ ಇಲ್ಲಿಯವರೆಗೆ 24, ಅಕ್ಬರ್ ರಸ್ತೆ ಆವರಣದಿಂದ ಕಳೆದ 47 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದ ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಪ್ರಾರಂಭಗೊಂಡಂತಾಗಿದೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ಹಾರಿಸಿದ ಕಾಂಗ್ರೆಸ್ ನಾಯಕರು, ವಂದೇಮಾತರಂ ಹಾಗೂ ರಾಷ್ಟ್ರಗೀತೆಯನ್ನು ಹಾಡಿದರು.

RELATED ARTICLES
- Advertisment -
Google search engine

Most Popular