ಮೈಸೂರು: ನಾಗರಿಕ ವೇದಿಕೆ ವತಿಯಿಂದ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆ ಪಿ-15 ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ವಿಸ್ತೃತ ಶಾಲಾ ಕೊಠಡಿಯನ್ನು ಮೈಸೂರು ಮಹಾನಗರ ಪಾಲಿಕೆ ಮಹಾಪೌರರಾದ ಶಿವಕುಮಾರ್ ನೆರವೇರಿಸಿದರು.

ಈ ಸಂದರ್ಭದಲ್ಲಿ ನಾಗರಿಕ ವೇದಿಕೆ ಅಧ್ಯಕ್ಷ ಕಾರ್ಯಾಧ್ಯಕ್ಷ ಕೆ.ಆರ್.ಶ್ರೀರಂಗಯ್ಯ, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್ ರಾಜು ಮತ್ತು ವೇದಿಕೆ ಗೌರವ ಅಧ್ಯಕ್ಷ ಬಿ.ಪಿ. ಪುಟ್ಟಸ್ವಾಮಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು.
ಇದಕ್ಕೂ ಮುನ್ನ ಬೆಳಿಗ್ಗೆ 7ಗಂಟೆಯಿಂದ 9ರವರೆಗೆ ಗಣಪತಿ ಹೋಮ ಮತ್ತು ವಾಸ್ತು ಹೋಮ ನಡೆಸಲಾಯಿತು.
