Friday, April 11, 2025
Google search engine

Homeರಾಜ್ಯರಾಮ ಮಂದಿರ ಉದ್ಘಾಟನೆ: ನಾಳೆ ಸರ್ಕಾರಿ ರಜೆ ಕೊಡೊಲ್ಲ- ಸಿಎಂ ಸಿದ್ದರಾಮಯ್ಯ

ರಾಮ ಮಂದಿರ ಉದ್ಘಾಟನೆ: ನಾಳೆ ಸರ್ಕಾರಿ ರಜೆ ಕೊಡೊಲ್ಲ- ಸಿಎಂ ಸಿದ್ದರಾಮಯ್ಯ

ತುಮಕೂರು: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮ ನಾಳೆ ಅಂದರೆ ಜನವರಿ 22ರಂದು ನಡೆಯಲಿದ್ದು, ಆದರೆ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ನಾಳೆ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ಆಗ್ರಹಿಸಿದ್ದವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಸರ್ಕಾರಿ ರಜೆ ಬಗ್ಗೆ ಸಿಎಂ ಸಿದ್ದರಾಮಯ್ಯನವರು ತಮ್ಮ ನಿಲುವು ಪ್ರಕಟಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ನಾಳೆ ಮುಜರಾಯಿ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಯುತ್ತೆ. ಆದರೆ ಸರ್ಕಾರಿ ರಜೆ ಇಲ್ಲ. ನಾಳೆ ಮುಜರಾಯಿ ದೇಗುಲಗಳಲ್ಲಿ ದಾಸೋಹ, ಪಾನಕ-ಫಲಹಾರ ವ್ಯವಸ್ಥೆ ಬಗ್ಗೆ ನನಗೆ ಮಾಹಿತಿ ಇಲ್ಲ. ನಾಳೆ ಮಹದೇವಪುರದಲ್ಲಿ ರಾಮನ ದೇವಸ್ಥಾನ ಉದ್ಘಾಟನೆ ಮಾಡುತ್ತಿದ್ದೇನೆ. ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ದೇಗುಲ ಉದ್ಘಾಟಿಸುತ್ತೇನೆ ಎಂದು ಹೇಳಿದರು.

ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಅಲ್ಲದೇ ಹಿಂದೂಪರ ಸಂಘಟನೆಗಳು, ಬೆಂಗಳೂರು ವಕೀಲರ ಸಂಘವು ಸಹ ರಜೆ ನೀಡುವಂತೆ ಮನವಿ ಮಾಡಿತ್ತು. ಆದರೆ ಇದೀಗ ಅಂತಿಮವಾಗಿ ಸಿದ್ದರಾಮಯ್ಯನವರು ರಜೆ ಘೋಷಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

RELATED ARTICLES
- Advertisment -
Google search engine

Most Popular