ಮಂಡ್ಯ : ಜಿಲ್ಲೆಯ ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿ ಚಿಕ್ಕಬಳ್ಳಿ-ಆನಸೋಸಲು ಗ್ರಾಮದ ಶ್ರೀ ಈಶ್ವರ ದೇವಾಲಯ ಟ್ರಸ್ಟ್ ಹಾಗೂ ಶ್ರೀ ದೇವಾಲಯ ಸೇವಾ ಉಪಸಮಿತಿಗಳು ಇವರ ಸಂಯುಕ್ತಾಶ್ರಯದಲ್ಲಿ ಶ್ರೀಆದಿಚುಂಚನಗಿರಿ ಮಠದ ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ದಿವ್ಯ ಸಂಸ್ಮರಣೆಯೊಂದಿಗೆ ಚಿಕ್ಕಬಳ್ಳಿಯ ಶ್ರೀಈಶ್ವರ ದೇವಾಲಯದಲ್ಲಿ ಶ್ರೀ ಈಶ್ವರ ದೇವರ ನೂತನ ದೇವಾಲಯ ಉದ್ಘಾಟನೆ ಶ್ರೀ ಈಶ್ವರ, ಶ್ರೀಮಹಾಗಣಪತಿ, ಶ್ರೀ ಸುಬ್ರಹ್ಮಣ್ಯ, ಶ್ರೀಬಸವೇಶ್ವರ ದೇವರುಗಳ ಪ್ರತಿಷ್ಠಾಪನಾ ಮಹೋತ್ಸವನ್ನು ಅಕ್ಟೋಬರ್ 6ರಂದು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಗೌರವಾಧ್ಯಕ್ಷ ರಾಮಕೃಷ್ಣ ಗೌಡ ಟಿ.ತಿಳಿಸಿದ್ದಾರೆ.
ಶ್ರೀಈಶ್ವರ ದೇವರ ಪ್ರತಿಷ್ಠಾಪನೆಯನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನೆರವೇರಿಸಿ ಆಶೀರ್ವಚನ ನೀಡಲಿದ್ದಾರೆ.
ಬೆಂಗಳೂರು ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಡಾ.ನಿಶ್ಚಲಾನಂದನಾಥ ಸ್ವಾಮೀಜಿ, ಕೊಮ್ಮೇರಹಳ್ಳಿ ವಿಶ್ವಮಾನವಕ್ಷೇತ್ರದ ಶ್ರೀಆದಿಚುಂಚನಗಿರಿ ಶಾಖಾ ಮಠದ ಶ್ರೀಪುರುಷೋತ್ತಮಾನಂದ ಸ್ವಾಮೀಜಿ, ಮಾಗಡಿ ಚಕ್ರಬಾವಿಯ ಜಂಗಮಮಠದ ಸಿದ್ಧಲಿಂಗಸ್ವಾಮೀಜಿ ದಿವ್ಯ ಸಾನಿಧ್ಯವನ್ನು ವಹಿಸಲಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಪಿ.ರವಿಕುಮಾರ್ ಗೌಡ, ಜನತಾ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್, ಜೆಡಿಎಸ್ ಮುಖಂಡ, ಮನ್ ಮುಲ್ ನಿರ್ದೇಶಕ ಬಿ.ಆರ್.ರಾಮಚಂದ್ರು, ಮಂಡ್ಯ ತಹಶೀಲ್ದಾರ್ ಎಸ್.ವಿಶ್ವನಾಥ, ಕೆರಗೋಡು ಆರಕ್ಷಕ ಉಪನಿರೀಕ್ಷಕ ಕಾಶಿನಾಥ್ ಬಗಲಿ ಪಾಲ್ಗೊಳ್ಳಲಿದ್ದಾರೆ.
ಅಕ್ಟೋಬರ್ 5ರಂದು ಬೆಳಗ್ಗೆ 9.25ರ ವಸು ಮುಹೂರ್ತದಲ್ಲಿ ಡಾ.ಎಸ್.ಪಿ.ದಯಾನಂದ ಮೈಸೂರು ಶೈವಾಗಮ ಪ್ರವೀಣರವರ ತಂಡದಿಂದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಅ.6ರಂದು12.30ಕ್ಕೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.