Saturday, April 19, 2025
Google search engine

Homeರಾಜ್ಯಸುದ್ದಿಜಾಲಮಡಿಕೇರಿ ಸತತ ಮಳೆ: ಹಲವು ಕುಟುಂಬಗಳ ಸ್ಥಳಾಂತರ

ಮಡಿಕೇರಿ ಸತತ ಮಳೆ: ಹಲವು ಕುಟುಂಬಗಳ ಸ್ಥಳಾಂತರ

ಮಡಿಕೇರಿ: ನಿರಂತರ ಸುರಿಯುತ್ತಿರುವ ಭಾರೀ ಮಳೆಗೆ ಕೊಡಗಿನ. ನದಿ, ತೊರೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗುಡ್ಡಗಳು ಜರಿಯುತ್ತಿದ್ದು, ರಸ್ತೆಗಳು ಜಲಾವೃತಗೊಳ್ಳುತ್ತಿವೆ. ಅನೇಕ ಮನೆಗಳು ಕುಸಿದು ಬಿದ್ದಿವೆ. ಹಲವು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ವಿರಾಜಪೇಟೆ ತಾಲೂಕು ಅಮ್ಮತ್ತಿ ಹೋಬಳಿ ಕರಡಿಗೋಡು ಗ್ರಾಮದ ಹೊಳೆಕೆರೆಯಲ್ಲಿ ಭಾರಿ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಕಾರಣದಿಂದ ಕರಡಿಗೋಡು ಹೊಳೆಕೆರೆ ಬದಿಯಲ್ಲಿ ವಾಸವಿರುವ ೯ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಅಲ್ಲದೆ, ಇನ್ನೂ ಕೆಲವೆಡೆ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ.

ಭಾಗ ಮಂಡಲದ ತ್ರಿವೇಣಿ ಸಂಗಮ ಉಕ್ಕಿ ಹರಿಯುತ್ತಿದ್ದು, ಪ್ರವಾಹದ ನೀರು ಶ್ರೀಭಗಂಡೇಶ್ವರ ದೇವಾಲಯದ ಮೆಟ್ಟಿಲುಗಳನ್ನು ಆವರಿಸಿದೆ. ಅಕ್ಕಪಕ್ಕದ ಅಂಗಡಿಗಳು ಜಲಾವೃತಗೊಂಡಿವೆ. ರಸ್ತೆ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ರಸ್ತೆಯಲ್ಲಿ ವಾಹನ ನಿರ್ಬಂಧಿಸಲಾಗಿದೆ.

RELATED ARTICLES
- Advertisment -
Google search engine

Most Popular