Saturday, April 19, 2025
Google search engine

Homeರಾಜ್ಯರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಳ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಳ: ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಕೆಲವು ದಿನಗಳಿಂದ ಡೆಂಗ್ಯೂ ರೋಗ ಪ್ರಕರಣ ಹೆಚ್ಚಾಗುತ್ತಿದ್ದು,  ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.

ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ.

ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.

ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಸೆ.08ರವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.

ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸೆಪ್ಟೆಂಬರ್ ​​ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ವೇಳೆ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದರು.

ಡೆಂಗ್ಯೂ ಮುಖ್ಯವಾಗಿ ಮಳೆಗೆ ಸಂಬಂಧಿಸಿದೆ. ಮಳೆ ಹೆಚ್ಚಾದಾಗ ಪ್ರಕರಣಗಳು ಹೆಚ್ಚಾಗುತ್ತವೆ. 2022ರ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್‌ ತಿಂಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಜುಲೈ ಮತ್ತು ಆಗಸ್ಟ್‌ ತಿಂಗಳಿನಲ್ಲೇ ಹೆಚ್ಚು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಹಾಗೂ ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸುವಂತೆ ಸೂಚಿಸಿದ್ದರು.

RELATED ARTICLES
- Advertisment -
Google search engine

Most Popular