ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಕೆಆರ್ ಎಸ್ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಕಾವೇರಿ ನದಿಯಲ್ಲಿ ಮತ್ತೆ ಪ್ರವಾಹ ಆತಂಕ ಎದುರಾಗಿದೆ.
ಡ್ಯಾಂ ನಿಂದ ನದಿಗೆ 30 ರಿಂದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಬಗ್ಗೆ ಕಾವೇರಿ ನೀರಾವರಿ ನಿಗಮದಿಂದ ಎಚ್ಚರಿಕೆಯ ತುರ್ತು ಸಂದೇಶ ಪ್ರಕಟಿಸಿದ್ದಾರೆ.

ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.