Friday, April 11, 2025
Google search engine

Homeಸ್ಥಳೀಯಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳ: ತಗ್ಗುಪ್ರದೇಶದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳ: ತಗ್ಗುಪ್ರದೇಶದ ಜನರು ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಮೈಸೂರು: ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು,  ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ತಗ್ಗು ಪ್ರದೇಶದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲೂಕಿನ ಬೀಚನಹಳ್ಳಿ ಗ್ರಾಮದ ಬಳಿ ಕಬಿನಿ ಜಲಾಶಯವಿದ್ದು, ಸಮುದ್ರ ಮಟ್ಟದಿಂದ 2284 ಅಡಿ ಎತ್ತರ್ವಿದ್ದು, ಗರಿಷ್ಠ ಸಾಮರ್ಥ್ಯ ಹೊಂದಿದೆ. ಜಲಾಶಯದ  ಇಂದಿನ ನೀರಿನ ಮಟ್ಟ 2280.51 ಅಡಿಗಳಿಗೆ ಏರಿಕೆಯಾಗಿದ್ದು,  ಕಬಿನಿ ಜಲಾಶಯದ ಇಂದಿನ ಒಳಹರಿವು 25896 ಕ್ಯೂಸೆಕ್ ಗೆ ಹೆಚ್ಚಳವಾಗಿದೆ. ಜಲಾಶಯದ ಹೊರ ಹರಿವು 11250 ಕ್ಯೂಸೆಕ್ ಇದೆ. ಒಟ್ಟು ಕಬಿನಿ ಜಲಾಶಯದಲ್ಲಿ 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, ಜಲಾಶಯದಲ್ಲಿಂದು 17.34 ಟಿಎಂಸಿ ನೀರು ಸಂಗ್ರಹವಾಗಿದೆ.

ಕಬಿನಿ ಜಲಾಶಯದ ಹೊರಹರಿವು ಯಾವುದೇ ಕ್ಷಣದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆಯಿದ್ದು, ಕಪಿಲಾ ನದಿಪಾತ್ರದ ಇಕ್ಕೆಲಗಳಲ್ಲಿ ವಾಸಿಸುತ್ತಿರುವ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.

RELATED ARTICLES
- Advertisment -
Google search engine

Most Popular