ದೆಹಲಿಯ ಶೂ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ: ನಾಲ್ವರು ಸಾವು, ಇಬ್ಬರಿಗೆ ಗಾಯ!
ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ..

ನವದೆಹಲಿ: ದೆಹಲಿಯ ಮಂಗೋಲ್ಪುರಿ ಕೈಗಾರಿಕಾ ಪ್ರದೇಶದಲ್ಲಿರುವ ಶೂ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಅಕ್ಟೋಬರ್ 31ರ ರಾತ್ರಿ 9.30ರ ಸುಮಾರಿಗೆ ಕಾರ್ಖಾನೆಯ ನೆಲಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ಬೆಂಕಿ ಮೂರನೇ ಮಹಡಿಯವರೆಗೂ ವ್ಯಾಪಿಸಿದೆ. ಮಾಹಿತಿ ತಿಳಿದ ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.ಘಟನೆ ವೇಳೆ ಕಾರ್ಖಾನೆಯಲ್ಲಿದ್ದ 20ರಿಂದ 25 ಮಂದಿಯಲ್ಲಿ ಬಹುತೇಕರು ಹೊರಬಂದಿದ್ದಾರೆ. ಆರು ಮಂದಿ ಒಳಗೆ ಸಿಲುಕಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾದರಕ್ಷೆ ತಯಾರಿಕೆಗೆ ಬಳಸುವ ರಾಸಾಯನಿಕಗಳಿಂದ ಬೆಂಕಿ ವೇಗವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ.
ಸಂಬಂಧಿತ ಸುದ್ದಿಗಳು

ಮಂಡ್ಯದಲ್ಲಿ 100 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗೆ ಸಿಎಂ ಸೂಚನೆ
ಮಂಡ್ಯ ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಯಾಗಿರುವ ಸುಸಜ್ಜಿತ ಹೃದ್ರೋಗ ಚಿಕಿತ್ಸಾ ಸೌಲಭ್ಯ
◷ 01/11/2026
ಹಾಸನಾಂಬೆ ಭಕ್ತರಿಗೆ ಗುಡ್ನ್ಯೂಸ್: ಕೇವಲ 60 ರೂಪಾಯಿಗೆ ಲಾಡು ಪ್ರಸಾದ ವಿತರಣೆ..!
ಧರ್ಮ ದರ್ಶನಕ್ಕೆ ಬರುವ ಭಕ್ತರಿಗೆ ಲಾಡು ಪ್ರಸಾದವನ್ನು ಗರಿಷ್ಠ 60 ರೂಪಾಯಿಗೆ ವಿತರಿಸುವಂತೆ
◷ 01/11/2026
ಹಾಲಿನ ದರ ಏರಿಕೆ ಅನಿವಾರ್ಯ: ರೈತರ ಆದಾಯ ಹೆಚ್ಚಳಕ್ಕೆ ಸರ್ಕಾರದ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿಕೆಶಿ!
ರಾಜ್ಯದಲ್ಲಿ ನವೆಂಬರ್ 1ರಿಂದ ಜಾರಿಗೆ ಬರುವಂತೆ ನಂದಿರ್ಕಾರ
◷ 01/11/2026
17 ಖೈದಿಗಳು ಜೈಲಿನಿಂದ ಎಸ್ಕೇಪ್ ಕೇಸ್: ಅಧಿಕಾರಿಗಳ ಅಮಾನತು, ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ!
ತಮಿಳುನಾಡಿನ ಥೇಣಿ ಜಿಲ್ಲೆಯ ಉಪಜೈಲಿನಿಂದ 17 ವಿಚಾರಣಾಧೀನ ಖೈದಿಗಳು ಪರಾರಿಯಾದ ಪ್ರಕರಣಕ್ಕೆ
◷ 01/11/2026
