Monday, May 12, 2025
Google search engine

HomeUncategorizedರಾಷ್ಟ್ರೀಯಭಾರತ-ಪಾಕ್ ಉದ್ವಿಗ್ನತೆ: ಬಂದ್ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭಿಸಲು ಸೂಚನೆ

ಭಾರತ-ಪಾಕ್ ಉದ್ವಿಗ್ನತೆ: ಬಂದ್ ಆಗಿದ್ದ 32 ಏರ್‌ಪೋರ್ಟ್‌ಗಳು ಮತ್ತೆ ಕಾರ್ಯಾರಂಭಿಸಲು ಸೂಚನೆ

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆ ಬಂದ್ ಆಗಿದ್ದ ವಿವಿಧ ರಾಜ್ಯಗಳ 32 ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭ ಮಾಡಲು ವಾಯುಪಡೆ ಸೂಚನೆ ನೀಡಿರುವುದಾಗಿ ವರದಿಯಾಗಿದೆ.

32 ವಿಮಾನ ನಿಲ್ದಾಣಗಳನ್ನು ತೆರೆಯುವಂತೆ ಭಾರತೀಯ ವಾಯುಪಡೆ ಅಧಿಕಾರಿಗಳು ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಸಂಬಂಧಪಟ್ಟ ವಿಮಾನ ನಿಲ್ದಾಣಗಳಿಗೆ ಸೂಚನೆ ನೀಡಿದೆ. ಹೀಗಾಗಿ ದೇಶದ ಪಶ್ಚಿಮ ಮತ್ತು ಉತ್ತರ ಭಾಗಗಳಲ್ಲಿ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ವಿಮಾನ ನಿಲ್ದಾಣಗಳು ಮತ್ತೆ ಕಾರ್ಯಾರಂಭಿಸಲಿದೆ.

ಇತ್ತೀಚೆಗೆ ಭಾರತ ಪಾಕ್ ನಡುವಿನ ಸಂಘರ್ಷ ತೀವ್ರಗೊಂಡಿತ್ತು. ಈ ಹಿನ್ನೆಲೆ ಸುರಕ್ಷತಾ ಕ್ರಮವಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು 32 ಏರ್‌ಪೋರ್ಟ್‌ಗಳನ್ನು ಮೇ 15ರ ವರೆಗೆ ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಸೂಚನೆ ನೀಡಿತ್ತು.

ಪಂಜಾಬ್‌ನ ಅಮೃತಸರ, ಲುಧಿಯಾನ, ಪಟಿಯಾಲ, ಬಟಿಂಡಾ, ಹಲ್ವಾರಾ ಮತ್ತು ಪಠಾಣ್‌ಕೋಟ್, ಹಿಮಾಚಲ ಪ್ರದೇಶದ ಭುಂತರ್, ಶಿಮ್ಲಾ ಮತ್ತು ಕಾಂಗ್ರಾ ಗಗ್ಗಲ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಜಮ್ಮು, ಲಡಾಖ್‌ನ ಲೇಹ್, ರಾಜಸ್ಥಾನದ ಕಿಶೆಂಗಢ, ಜೈಸರ್, ಜೋದ್‌ಪುರ ಮತ್ತು ಬಿಕಾನೇರ್ ಮತ್ತು ಗುಜರಾತ್‌ನ ಮುಂದ್ರ, ಜಾಮ್‌ನಗರ ಸೇರಿದಂತೆ ಹಲವು ವಿಮಾನ ನಿಲ್ದಾಣಗಳನ್ನು ಬಂದ್ ಮಾಡಲಾಗಿತ್ತು. ಆದ್ರೆ ಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಏರ್‌ಪೋರ್ಟ್‌ಗಳನ್ನು ಕಾರ್ಯಾಚರಣೆ ಪುನರಾರಂಭಿಸುವಂತೆ ಭಾರತೀಯ ವಾಯುಸೇನೆ ಸೂಚಿಸಿದೆ.

RELATED ARTICLES
- Advertisment -
Google search engine

Most Popular