Monday, April 28, 2025
Google search engine

HomeUncategorizedರಾಷ್ಟ್ರೀಯಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಭಾರತದಿಂದ ಕಠಿಣ ಕ್ರಮ

ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳ ವಿರುದ್ಧ ಭಾರತದಿಂದ ಕಠಿಣ ಕ್ರಮ

ನವದೆಹಲಿ: ಪಹಲ್ಗಾಮ್‌ನಲ್ಲಿ ಉಗ್ರ ದಾಳಿ ಬಳಿಕ ಭಾರತ ಸರ್ಕಾರ ಪಾಕಿಸ್ತಾನದ ವಿರುದ್ಧ ಮತ್ತೊಂದು ಕಠಿಣ ಕ್ರಮ ಕೈಗೊಂಡಿದೆ. ಕೇಂದ್ರ ಗೃಹ ಇಲಾಖೆ ಪಾಕಿಸ್ತಾನದ 16 ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದೆ. ಈ ಚಾನೆಲ್‌ಗಳು ಪಹಲ್ಗಾಮ್ ದಾಳಿಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹರಡುತ್ತಿದ್ದು, ಜನರಲ್ಲಿ ಗೊಂದಲ ಉಂಟುಮಾಡುತ್ತಿದ್ದವು.

ನಿಷೇಧಿತ ಚಾನೆಲ್‌ಗಳು ಪ್ರಚೋದನಕಾರಿ ಹಾಗೂ ಕೋಮು ಸೂಕ್ಷ್ಮ ವಿಷಯಗಳನ್ನು ಹರಡುತ್ತಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ನಿಷೇಧಿತ ಪ್ಲಾಟ್‌ಫಾರ್ಮ್‌ಗಳಿಗೆ ಒಟ್ಟು 63 ಮಿಲಿಯನ್ ಚಂದಾದಾರರಿದ್ದಾರೆ. ಡಾನ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ಜಿಯೋ ನ್ಯೂಸ್ ಸೇರಿದಂತೆ ಪ್ರಮುಖ ಪಾಕಿಸ್ತಾನಿ ಮಾಧ್ಯಮ ಸಂಸ್ಥೆಗಳ ಚಾನೆಲ್‌ಗಳು ಈ ಪಟ್ಟಿ ಸೇರಿವೆ.

ಇರ್ಷಾದ್ ಭಟ್ಟಿ, ಅಸ್ಮಾ ಶಿರಾಜಿ, ಉಮರ್ ಚೀಮಾ ಮತ್ತು ಮುನೀಬ್ ಫಾರೂಕ್ ಅವರ ವೈಯಕ್ತಿಕ ಯೂಟ್ಯೂಬ್ ಚಾನೆಲ್‌ಗಳನ್ನೂ ಭಾರತ ನಿಷೇಧಿಸಿದೆ. ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್ ಹಾಗೂ ರಝಿ ನಾಮಾ ಹ್ಯಾಂಡಲ್‌ಗಳು ಸಹ ಈ ನಿರ್ಬಂಧಕ್ಕೆ ಒಳಪಟ್ಟಿವೆ.

ಈ ಕ್ರಮ, ದೇಶದ ಆಂತರಿಕ ಭದ್ರತೆ ಹಾಗೂ ಶಾಂತಿಗೆ ಧಕ್ಕೆ ತರುವ ಅಂಶಗಳನ್ನು ತಡೆಯಲು ಕೇಂದ್ರ ಸರ್ಕಾರ ಕೈಗೊಂಡ ಮಾಸ್ಟರ್ ಸ್ಟ್ರೋಕ್ ಎಂದು ವಿಶ್ಲೇಷಿಸಲಾಗುತ್ತಿದೆ.

RELATED ARTICLES
- Advertisment -
Google search engine

Most Popular