Saturday, April 19, 2025
Google search engine

Homeಕ್ರೀಡೆಏಷ್ಯಾ ಕಪ್‌ಗೆ ಭಾರತ ತಂಡ ಪ್ರಕಟ: ರಾಹುಲ್, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾಕ್ಕೆ ವಾಪಸ್

ಏಷ್ಯಾ ಕಪ್‌ಗೆ ಭಾರತ ತಂಡ ಪ್ರಕಟ: ರಾಹುಲ್, ಶ್ರೇಯಸ್ ಅಯ್ಯರ್ ಟೀಂ ಇಂಡಿಯಾಕ್ಕೆ ವಾಪಸ್

ನವದೆಹಲಿ: ಆ.೩೦ರಿಂದ ಆರಂಭವಾಗಲಿರುವ ಬಹುನಿರೀಕ್ಷಿತ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ೧೮ ಸದಸ್ಯರ ಭಾರತ ತಂಡವನ್ನು ಸೋಮವಾರ ಪ್ರಕಟಿಸಲಾಗಿದೆ.

ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕನ್ನಡಿಗ ಕೆ. ಎಲ್.ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಮತ್ತೆ ತಂಡ ಕೂಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಯುವ ತಾರೆ ತಿಲಕ್‌ವರ್ಮಾಗೆ ಮಣೆ ಹಾಕಲಾಗಿದೆ. ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್‌ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ.

ಭಾರತ ತಂಡ: ರೋಹಿತ್ ಶರ್ಮಾ(ನಾಯಕ) ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್(ವಿಕೆಟ್‌ಕೀಪರ್), ಶುಭಮನ್‌ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, (ಉಪ ನಾಯಕ) ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಕುಲದೀಪ್ ಯಾದವ್.

RELATED ARTICLES
- Advertisment -
Google search engine

Most Popular