ವರದಿ :ಸ್ಟೀಫನ್ ಜೇಮ್ಸ್.
ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿದ ಭಾರತ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಮುಂಬೈ: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಬರೆದಿದೆ.

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಇಂದು ನಡೆದ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 52 ರನ್ ಗಳ ಅಂತರದಲ್ಲಿ ಮಣಿಸಿ ಭರ್ಜರಿ ಜಯ ದಾಖಲಿಸಿತು.
ಭಾರತ ನೀಡಿದ್ದ 299 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ 45.3 ಓವರ್ ನಲ್ಲಿ 246 ರನ್ ಗಳಿಗೇ ತನ್ನೆಲ್ಲಾ ವಿಕೆಟ್ ಕಳೆದು ಕೊಂಡು 52 ರನ್ ಗಳ ಅಂತರದಲ್ಲಿ ಭಾರತದ ಎದುರು ಮಂಡಿಯೂರಿತು.



