ಹೈದರಾಬಾದ್: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿದ್ದು, ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ೦೯:೧೫ರ ಸುಮಾರಿಗೆ ಅರುಣಾಚಲ ಪ್ರದೇಶದ ಬೊಮ್ಡಿಲಾ ಬಳಿ ಕಾರ್ಯಾಚರಣೆ ನಡೆಸುತ್ತಿದ್ದ ಆರ್ಮಿ ಏವಿಯೇಷನ್ ಚೀತಾ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ ಎಂದು ವರದಿಯಾಗಿದೆ. ಬೊಮ್ಡಿಲಾ ಪಶ್ಚಿಮದ ಮಂಡಲ ಹಿಲ್ಸ್ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಶೋಧ ಕಾರ್ಯಾಚರಣೆ ಆರಂಭವಾಗಿದೆ. ಹೆಚ್ಚಿನ ವಿವರಗಳಿಗಾಗಿ ಕಾಯಲಾಗುತ್ತಿದೆ ಎಂದು ರಕ್ಷಣಾ ಇಲಾಖೆಯ ಗುವಾಹಟಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ರಾವತ್ ತಿಳಿಸಿದ್ದಾರೆ.
ಸೇನೆಯ ಹೆಲಿಕಾಪ್ಟರ್ ಮಧ್ಯದಲ್ಲಿ ಸಂಪರ್ಕವನ್ನು ಕಳೆದುಕೊಂಡಿತು ಮತ್ತು ಅದು ಸೆಂಗೆ ಗ್ರಾಮದಿಂದ ಮಿಸ್ಸಮರಿಗೆ ತೆರಳುತ್ತಿತ್ತು. ಮಧ್ಯಾಹ್ನ ೧೨.೩೦ ರ ಸುಮಾರಿಗೆ ಬಂಗ್ಜಲೇಪ್, ದಿರಾಂಗ್ ಪಿಎಸ್ ಗ್ರಾಮಸ್ಥರು ಅಪಘಾತಕ್ಕೀಡಾದ ಹೆಲಿಕಾಪ್ಟರ್ ಪತ್ತೆಯಾಗಿದೆ ಎಂದು ತಿಳಿಸಿದರು ಎಂದು ಅರುಣಾಚಲ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ.