Monday, May 12, 2025
Google search engine

HomeUncategorizedರಾಷ್ಟ್ರೀಯಭಾರತೀಯ ಸೇನೆ ಆಪರೇಷನ್ ಸಿಂಧೂರ ಮೂಲಕ ಉಗ್ರರಿಗೆ ತಕ್ಕ ಉತ್ತರ ನೀಡಿದೆ: ರಾಜನಾಥ್ ಸಿಂಗ್

ಭಾರತೀಯ ಸೇನೆ ಆಪರೇಷನ್ ಸಿಂಧೂರ ಮೂಲಕ ಉಗ್ರರಿಗೆ ತಕ್ಕ ಉತ್ತರ ನೀಡಿದೆ: ರಾಜನಾಥ್ ಸಿಂಗ್

ನವದೆಹಲಿ: ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಮೂಲಕ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ತಕ್ಕ ಉತ್ತರ ನೀಡಿದೆ. ಈ ಮೂಲಕ ಭಾರತೀಯ ಸೇನೆ ಧೈರ್ಯ ಮತ್ತು ಸಂಯಮವನ್ನು ಪ್ರದರ್ಶಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾನುವಾರ ತಿಳಿಸಿದ್ದಾರೆ.

ಲಖನೌದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಆಪರೇಷನ್ ಸಿಂಧೂರ ಕೇವಲ ಮಿಲಿಟರಿ ಕ್ರಮವಲ್ಲ. ಇದು ಭಯೋತ್ಪಾದನೆಯ ವಿರುದ್ಧ ಹೋರಾಡುವ ಭಾರತದ ಇಚ್ಛಾಶಕ್ತಿಯ ಸಂಕೇತವಾಗಿದೆ. ಗಡಿಯಲ್ಲಿ ಭಯೋತ್ಪಾದನೆ ವಿರುದ್ದ ಭಾರತ ಹೊಸ ಪರಿಣಾಮಕಾರಿ ಕ್ರಮಕೈಗೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ’ ಎಂದು ಹೇಳಿದ್ದಾರೆ.

‘ನಮ್ಮ ಸೇನೆಯು ಪಾಕಿಸ್ತಾನದ ನಾಗರಿಕರನ್ನು ಎಂದಿಗೂ ಗುರಿಯಾಗಿಸಿಕೊಂಡಿಲ್ಲ, ಸೇನಾ ನೆಲೆಗಳ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಆದರೆ ಪಾಕಿಸ್ತಾನವು ಭಾರತದಲ್ಲಿನ ನಾಗರಿಕ ಪ್ರದೇಶಗಳು ಮತ್ತು ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಪ್ರಯತ್ನಿಸಿತ್ತು. ಪಹಲ್ಲಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತವು ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ಹೇಗೆ ದಾಳಿ ನಡೆಸಿದೆ ಎಂದು ಜಗತ್ತು ನೋಡಿದೆ’ ಎಂದರು.

RELATED ARTICLES
- Advertisment -
Google search engine

Most Popular