Friday, April 11, 2025
Google search engine

Homeರಾಜ್ಯಸುದ್ದಿಜಾಲಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ. ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನ

ಬೆಂಗಳೂರು: ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರನ್ನ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ ಎನ್ನಲಾಗಿದೆ, ಈ ಕುರಿತು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ‘ಭಾರತದ ರಾಷ್ಟ್ರಪತಿಗಳು ಡಾ.ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ.

ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಮೂರ್ತಿ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular