ಹಾಸನ : ನೂರಾರು ಮಹಿಳೆಯರನ್ನು ಆಮಿಷವೊಡ್ಡಿ, ಬೆದರಿಸಿ, ಪುಸಲಾಯಿಸಿ ತನ್ನ ಕಾಮವಾಂಚೆ ತೀರಿಸಿಕೊಂಡು, ಅದನ್ನು ವಿಡಿಯೋ ಮಾಡಿಕೊಂಡು ವಿಕೃತಿ ಮೆರೆದಿರುವ ಆ ಯುವ ಕಾಮುಕ ಜೆಡಿಎಸ್ ಸಂಸದ, ಎನ್‌ಡಿಎ ಅಭ್ಯರ್ಥಿ, ಎಚ್.ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಎನ್ನಲಾಗುತ್ತಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ ನೀಡಲಾಗಿದೆ. ಇನ್ನು, ಅಶ್ಲೀಲ ವಿಡಿಯೋ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಪಕ್ಷವು ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು. ಕಾನೂನು ಎಲ್ಲರಿಗೂ ಸಮಾನವಾಗಿದೆ ಎಂದು ಹೇಳಿದ್ದಾರೆ. ಪ್ರಜ್ವಲ್ ಎಲ್ಲಿಗೆ ಹೋಗುತ್ತಾರೆ. ಏನು ಮಾಡುತ್ತಾರೆ ಎಂಬದು ನನಗೆ ಹೇಗೆ ಗೊತ್ತಾಗುತ್ತದೆ. ಚುನಾವಣೆಗೆ ಸಮಯದಲ್ಲಿ ಪೆನ್‌ಡ್ರೈವ್‌ಗಳನ್ನು ಮೂಲಕ ಅಪಪ್ರಚಾರ ಮಾಡಲಾಗಿದೆ ಎಂದಿದ್ದಾರೆ. ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಮುಖಂಡ, ವಿಧಾನಸಭಾ ವಿಪಕ್ಷ ನಾಯಕ ಆರ್ ಅಶೋಕ್, ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.