ಗುಂಡ್ಲುಪೇಟೆ: ಕೃಷಿ ಇಲಾಖೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪುರಸಭಾ ಸದಸ್ಯ ರಾಜ್ ಗೋಪಾಲ್ ಹಾಲಹಳ್ಳಿ ಆಗ್ರಹಿಸಿದ್ದಾರೆ.
ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಏಳು ತಿಂಗಳು ಕಳದರು ಯಾವುದೇ ರೈತರಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸರ್ಕಾರವು ಆರ್ಥಿಕವಾಗಿ ಮೇಲೆತ್ತುವ ಉದ್ದೇಶದಿಂದ ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣಗಳನ್ನು ನೀಡುತ್ತಿದ್ದು ಸರಿ ಅಷ್ಟೇ.ಆದರೆ ಇತ್ತೀಚಿನ ದಿನಗಳಲ್ಲಿ ಯಾವುದೇ ಅನುದಾನ ಬಿಡುಗಡೆ ಮಾಡದೆ ಇರುವುದು ಸರಿಯಲ್ಲ ದಲಿತರ ಮತ ಪಡೆದು ಅಹಿಂದ ಹೆಸರಿನಲ್ಲಿ ಅಧಿಕಾರ ಪಡೆದ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಅನುದಾನವನ್ನು ನೀಡಲು ವಿಫಲವಾಗಿದ್ದು ಶೀಘ್ರವೇ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.