Saturday, April 19, 2025
Google search engine

Homeರಾಜ್ಯಸುದ್ದಿಜಾಲಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯಕುಮಾರ್ ಆಯ್ಕೆಗೆ ಒತ್ತಾಯ

ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯಕುಮಾರ್ ಆಯ್ಕೆಗೆ ಒತ್ತಾಯ

ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಮುಂಬರುವ ಜೂನ್ ತಿಂಗಳಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯಿಂದ ಮೈಸೂರು ಜಿಲ್ಲಾ ಕಾಂಗ್ರೆಸ್ ಗಾಮಾಂತರ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಅವರಿಗೆ ಮುಖ್ಯಮಂತ್ರಿಗಳು ಹಾಗೂ ಕೆ.ಪಿ.ಸಿಸಿ.ಅಧಕ್ಷರಾದ ಡಿ.ಕೆ.ಶಿವಕುಮಾರ್ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದ ಎಲ್ಲಾ ಸಚಿವರುಗಳು ಎಲ್ಲಾ ಕಾಂಗ್ರೆಸ್ ಪಕ್ಷದ ಶಾಸಕರುಗಳ ಒಮ್ಮತದಿಂದ ಅಭ್ಯರ್ಥಿಯಾಗಿ ಡಾ.ಬಿ.ಜೆ. ವಿಜಯಕುಮಾರ್ ಆಯ್ಕೆ ಮಾಡಿ ಅವಕಾಶ ಕಲ್ಪಿಸ ಬೇಕೆಂದು ತಾಲ್ಲೂಕು ಕಾಂಗ್ರೆಸ್ ವಕ್ತಾರ ಜಾಬೀರ್, ಕೆ.ಆ‌ರ್.ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಎಸ್.ಮಹದೇವ್,ನಗರ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ರಮೇಶ್ ಒತ್ತಾಯಿಸಿದರು.

ಕೆ.ಆರ್.ನಗರ ಪತ್ರಕರ್ತರ ಸಂಘದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಡಾ.ವಿಜಯಕುಮಾರ್ ಅವರು ಮೈಸೂರು ಜಿಲ್ಲಾ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷರು ಅವಧಿಯಲ್ಲಿ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೇಸ್ ಪಕ್ಷದ ಬಲ ವರ್ಧನೆಗಾಗಿ ಬಹಳ ಉತ್ತಮವಾಗಿ ಪಕ್ಷ ಸಂಘಟನೆಯನ್ನು ಸತತ 15 ವರ್ಷದಿಂದ. ಮಾಡಿದ್ದಾರೆ.

ಕೊರೋನಾ ಸಂದರ್ಭದಲ್ಲಿ ಪಕ್ಷದಿಂದ ನಡೆದ ಕಾರ್ಯಕ್ರಮಗಳನ್ನು ಉತ್ತಮವಾಗಿ ನಡೆಸಿದಲ್ಲದೆ, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಡುತ್ತಾ ಬಂದಿದ್ದು, ಇವರ ಅಧ್ಯಕ್ಷರ ಅವಧಿಯಲ್ಲಿ ನಡೆದ ನಂಜನಗೂಡು ಉಪಚುನಾವಣೆ, ಸ್ಥಳಿಯ ಸಂಸ್ಥೆ ಚುನಾವಣೆ ಮತ್ತು 2023 ವಿಧಾನಸಭೆ ಚುನಾವಣೆಗಳಲ್ಲಿ ಪಕ್ಷವನ್ನು ಸ್ಥಳೀಯ ಮಟ್ಟದಲ್ಲಿ ಸಂಘಟನೆ ಮಾಡಿ ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಹಕಾರಿಯಾಗಿದ್ದಾರೆ, ಆದ್ದರಿಂದ ಈ ಬಾರಿ ಜೂನ್ ತಿಂಗಳಲ್ಲಿ ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು ವಿಭಾಗದಿಂದ ಪಕ್ಷ ಟಿಕೆಟ್ ನೀಡಿದರೆ ಇನ್ನೂ ಉತ್ತಮವಾಗಿ ಅಭಿವೃದ್ಧಿ ಕೆಲಸ ಮಾಡುತ್ತಾರೆ ಎಂದರು.

ಜಿಲ್ಲೆಯವರಾದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಮತ್ತು ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮೈಸೂರು ಜಿಲ್ಲೆಯಿಂದ ಈ ಬಾರಿ ಜಿಲ್ಲಾ ಕಾಂಗ್ರೆಸ್ ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಅವರನ್ನು ಪರಿಗಣಸಿ ವಿಧಾನಪರಿಷತ್ ಅಭ್ಯರ್ಥಿಯಾಗಿ ಮಾಡ ಬೇಕೆಂದು ಮನವಿ ಮಾಡಿದರು.

ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ರಮೇಶ್, ಸಾಲಿಗ್ರಾಮ ತಾಲೂಕು ಕಾಂಗ್ರೆಸ್ ಪಕ್ಷದ ಕಾನೂನು ಸಲಹೆಗಾರ ವಕೀಲ ಮೂರ್ತಿ, ಯುವ ಕಾಂಗ್ರೆಸ್ ಮುಖಂಡ ಸಂದೇಶ್ ಇದ್ದರು.

ಚಿತ್ರಶೀರ್ಷಿಕೆ : ಪಟ್ಟಣದಲ್ಲಿ ತಾಲ್ಲೂಕು ಕಾಂಗ್ರೆಸ್ ವಕ್ತಾರ ಜಾಬೀರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವುದು.

RELATED ARTICLES
- Advertisment -
Google search engine

Most Popular