ಮಂಡ್ಯ: ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಶ್ರೀರಂಗಪಟ್ಟಣ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶ್ರೀರಂಗಪಟ್ಟಣ ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳೊಂದಿಗೆ ಆಸ್ಪತ್ರೆಯಲ್ಲಿ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಔಷಧಿಗಳ ಉಪಯೋಗಕ್ಕೆ ನಿಗದಿಪಡಿಸಿರುವ ದಿನಾಂಕವನ್ನು ಪರಿಶೀಲಿಸಿದರು. ಶ್ರೀರಂಗಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಸ್ಟಲ್ ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ ಹಾಗೂ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಸಬ್ ರಿಜಿಸ್ಟ್ರಾರ್ ಹಾಗೂ ತಾಲ್ಲೂಕು ಕಚೇರಿಗಳಿಗೆ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿ ಸಾರ್ವಜನಿಕರ ಕೆಲಸಗಳನ್ನು ನಿಗದಿತ ಸಮಯದಲ್ಲಿ ಮಾಡಿಕೊಡುವಂತೆ ಸೂಚನೆ ನೀಡಿದರು.
