ರಾಮನಗರ : ತಾಲ್ಲೂಕಿನ ಯಲಚವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಡ್ಡರಕುಪ್ಪೆ ತಾಂಡ್ಯಕ್ಕೆ ಜಿಲ್ಲಾ ಪಂಚಾಯತ್‌ನ ಯೋಜನಾ ನಿರ್ದೇಶಕರು ಮಂಜುನಾಥಸ್ವಾಮಿ ಹೆಚ್. ಎನ್ ಅವರು ಭೇಟಿ ನೀಡಿ, ಕೆರೆ ಹೊಳೆತ್ತುವ ಕಾಮಗಾರಿಯಲ್ಲಿ ಒಟ್ಟು 54 ಜನ ನರೇಗಾ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಅದರಲ್ಲಿ 26 ಮಹಿಳೆಯರು ಕೂಲಿಕಾರರು ಭಾಗವಹಿಸಿದ್ದರು. ಕಾಮಗಾರಿಯನ್ನು ಪರಿಶೀಲಿಸಿ ಸಂಬ0ಧ ಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ವೇಳೆ ನಿರ್ಮಾಣ ಹಂತದ ಶಾಲಾ ಅಡುಗೆ ಕೋಣೆ, ಶೌಚಾಲಯ ಮತ್ತು ಅಂಗನವಾಡಿ ಕಟ್ಟಡವನ್ನು ವೀಕ್ಷಿಸಿದರು.
ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣೆ: ಕಾರ್ಮಿಕರು ಪ್ರತಿದಿನ ಕೆಲಸದಲ್ಲಿ ತೊಡಗಿರುವುದರಿಂದ ಆರೋಗ್ಯದ ಕಡೆ ಗಮನ ಕೊಡುತ್ತಿಲ್ಲ. ಆದ್ದರಿಂದ ನರೇಗಾ ಕೂಲಿಕಾರರು ಇರುವಲ್ಲಿಯೇ ಆರೋಗ್ಯ ಶಿಬಿರ ಏರ್ಪಡಿಸಿ, ತಪಾಸಣೆಯನ್ನು ಮಾಡಲಾಗುತ್ತಿದೆ. ಆರೋಗ್ಯವಾಗಿದ್ದರೆ ಮಾತ್ರ ಕೆಲಸ ಮಾಡಲು ಸಾಧ್ಯ ಅದ್ದರಿಂದ ಎಲ್ಲ ಕಾರ್ಮಿಕರು ಸರಿಯಾದ ಸಮಯಕ್ಕೆ ಪೌಷ್ಟಿಕ ಆಹಾರವನ್ನು ಸೇವಿಸಿ ಆರೋಗ್ಯವಂತರಾಗಿ ಇರಬೇಕೆಂದು ಹೇಳಿದರು. ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಮಾಡಲಾಯಿತು, ಹಿಮೋಗ್ಲೋಬಿನ್ ಪ್ರಮಾಣ, ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಆರೋಗ್ಯ ಸಮಸ್ಯೆ ಕಂಡುಬ0ದವರಿಗೆ ವೈದ್ಯರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಿಫಾರಸ್ಸು ಮಾಡಿದರು.
ಇದೇ ವೇಳೆ ಮಹಾತ್ಮಗಾಂಧಿ ರಾಷ್ಟಿಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೋಜ್‌ಗಾರ್ ದಿವಸ್ ಆಚರಿಸಿ, ಕರಪತ್ರ ಹಂಚಿ, ನರೇಗಾ ಯೋಜನೆಯ ವೈಯಕ್ತಿಕ ಕಾಮಗಾರಿಗಳ ಬಗ್ಗೆ ಅರಿವು ಮೂಡಿಸಿ ಬೇಡಿಕೆ ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚಂದ್ರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಧಾ, ಸಮುದಾಯ ಆರೋಗ್ಯಾಧಿಕಾರಿ, ಜಿಲ್ಲಾ ಐ.ಇ.ಸಿ ಸಂಯೋಜಕರು ಅರುಣ್, ತಾಂತ್ರಿಕ ಸಹಾಯಕ ಅಭಿಯಂತರರು ಹೇಮಂತ್ ಯಾದವ್, ಗ್ರಾಮ ಕಾಯಕ ಮಿತ್ರ, ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಹಾಜರಿದ್ದರು.
