Sunday, April 6, 2025
Google search engine

Homeಸ್ಥಳೀಯಆರೋಗ್ಯ ಸಚಿವರಿಂದ ಜಿಲ್ಲಾ ಆಸ್ಪತ್ರೆಗೆ ಭೇಟಿ ಪರಿಶೀಲನೆ

ಆರೋಗ್ಯ ಸಚಿವರಿಂದ ಜಿಲ್ಲಾ ಆಸ್ಪತ್ರೆಗೆ ಭೇಟಿ ಪರಿಶೀಲನೆ

ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮೇಟಗಳ್ಳಿಯ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ವಾರ್ಡ್ ಗಳಿಗೆ ಭೇಟಿ ನೀಡಿ ರೋಗಿಗಳ ಯೋಗ ಕ್ಷೇಮ ವಿಚಾರಿಸಿದರು. ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ ಸ್ವಚ್ಛತೆಯನ್ನು ಕಾಪಾಡಿ ಕೊಂಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಕಲ ಚೇತನರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದುಕೊಂಡರು.
ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.

ನಂತರ ICU ವಾರ್ಡ್ ಗೆ ಭೇಟಿ ನೀಡಿ ರೋಗಿಗಳ ಸ್ಥಿತಿಗತಿಗಳ ಮಾಹಿತಿ ಪಡೆದುಕೊಂಡರು. ನಂತರ ಹೆರಿಗೆ ವಾರ್ಡ್ ಗೆ ಭೇಟಿ ನೀಡಿ ತಾಯಿ ಮಗುವಿನ ಆರೋಗ್ಯ ವಿಚಾರಿಸಿದರು. ನಾರ್ಮಲ್ ಹೆರಿಗೆಗಳನ್ನು ಮಾಡಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಸಿಜೇರಿಯನ್ ಮಾಡಬೇಕು ಎಂದು ಸೂಚಿಸಿದ ಅವರು ಔಷಧಿಗಳಿಗೆ ಹೊರಗೆ ಚೀಟಿ ಬರೆದು ನೀಡಬಾರದು. ಸಕಾಲದಲ್ಲಿ ರೋಗಿಗಳಿಗೆ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

ನಂತರ ಸಭೆ ನಡೆಸಿದ ಸಚಿವರು ಅಧಿಕಾರಿಗಳಿಂದ ಆಸ್ಪತ್ರೆ ಕುರಿತು ಮಾಹಿತಿ ಪಡೆದುಕೊಂಡರು. ತಾಲ್ಲೂಕು ಆಸ್ಪತ್ರೆಯವರು ರೋಗಿಗಳಿಗೆ ಹೆಚ್ಚಾಗಿ ಕೆ. ಆರ್. ಆಸ್ಪತ್ರೆಗೆ ರೆಫರ್ ಮಾಡುತ್ತಿದ್ದು, ಇದರ ಬದಲು ಜಿಲ್ಲಾ ಆಸ್ಪತ್ರೆಗೆ ರೆಫರ್ ಮಾಡಬೇಕು. ಇದರಿಂದ ಕೆ ಆರ್ ಆಸ್ಪತ್ರೆಯ ಒತ್ತಡ ಕಡಿಮೆ ಮಾಡುವ ಜೊತೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲಾ ಆಸ್ಪತ್ರೆಯ ಅಧೀಕ್ಷಕರಾದ ಡಾ. ಅಮರನಾಥ್ ಅವರು ಮಾಹಿತಿ ನೀಡಿ 180 ಅಕ್ಸಿಜಿನೇಟ್ಡ್ ಬೆಡ್,
80 ಅನ್ ಅಕ್ಸಿಜೀನೇಟ್ಡ್ ಬೆಡ್ ಗಳಿವೆ. ಹುದ್ದೆಗಳು ಖಾಲಿಯಿದ್ದು ಬರ್ತಿ ಮಾಡಬೇಕು. 10 ನರ್ಸ್ ಗಳು ಅಗತ್ಯವಾಗಿ ಬೇಕಾಗಿದೆ. ಟೆಂಡರ್ ಮೂಲಕ ರೋಗಿಗಳಿಗೆ ಪತ್ಯಾಹಾರ ನೀಡುತ್ತಾರೆ. ಬೆಳಿಗ್ಗೆ ಬ್ರೆಡ್ ಹಾಲು, ಮಧ್ಯಾಹ್ನ ಮೊಟ್ಟೆ ಊಟ ಹಾಗೂ ಸಂಜೆ ಊಟ ನೀಡುತ್ತಾರೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬೆಳಿಗ್ಗೆ ಬ್ರೆಡ್ ಬದಲು ಇಡ್ಲಿ ಉಪ್ಪಿಟ್ಟು ಹಾಗೂ ಇತರೆ ತಿಂಡಿ ನೀಡುವಂತೆ ಸೂಚಿಸಿದರು.

ಈ ಸಂಧರ್ಭದಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ, ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗಳಾದ ಟಿ.ಕೆ ಅನಿಲ್ ಕುಮಾರ್, ಆಯುಕ್ತರಾದ ರಂಧೀಪ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಪ್ರಸಾದ್ ಹಾಗೂ ವೈದ್ಯಾಧಿಕಾರಿಗಳು ಉಪಸ್ಧಿತರಿದ್ದರು.

RELATED ARTICLES
- Advertisment -
Google search engine

Most Popular