Tuesday, April 8, 2025
Google search engine

Homeಆರೋಗ್ಯಡೆಂಘೀ ನಿಯಂತ್ರಣಕ್ಕೆ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಡೆಂಘೀ ನಿಯಂತ್ರಣಕ್ಕೆ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ: ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ವರದಿ ಯಾಗುತ್ತಿರುವ ಹಿನ್ನೆಲೆ ಯಲ್ಲಿ ಎಲ್ಲಾ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದ್ದಾರೆ.

ಕುಡಿಯುವ ನೀರಿನ ಸರಬರಾಜು ಟ್ಯಾಂಕ್‌ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಡೆಂಘೀ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಘೀ ಪ್ರಕರಣಗಳನ್ನು ನಿಯಂತ್ರಿಸಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಆದೇಶಿಸಿದ್ದಾರೆ.

ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್‌ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮ ವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು, ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು, ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಛಾವಣಿಗಳು ಮತ್ತು ಆವರಣಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದ್ದಾರೆ.

ಎಳನೀರು ಮಾರಾಟಗಾರರು ಒಡೆದ ಎಳೆನೀರು ಚಿಪ್ಪುಗಳಲ್ಲಿ ಮಳೆ ನೀರು ಶೇಖರಣೆಯಾಗುವುದನ್ನು ತಡೆಗಟ್ಟಲು ಎಳೆನೀರು ಬುರುಡೆಗಳನ್ನು ನಾಲು, ಭಾಗಗಳಾಗಿ ಒಡೆದು, ಬೋರಲು ಇಡುವಂತೆ ಸೂಚಿಸಬೇಕು, ಮತ್ತು ಪ್ರತಿದಿನ ಕಡ್ಡಾಯವಾಗಿ ವಿಲೇವಾರಿ ಮಾಡುವಂತೆ ನೋಡಿಕೊಳ್ಳಬೇಕು, ಆರೋಗ್ಯ ಸಿಬ್ಬಂದಿಯವರ ಜೊತೆಗೆ ಗ್ರಾಮ ಪಂಚಾಯತಿಗಳ ಸದಸ್ಯರು, ಮಹಿಳಾ ಸ್ವ-ಸಹಾಯ ಗುಂಪುಗಳ ಸದಸ್ಯರು, ಅಂಗನವಾಡಿ, ಶಾಲೆ ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಶಿಕ್ಷಣದ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮಿಕೊಳ್ಳಬೇಕು ಎಂದು ಸಚಿವರು ತಮ ಮಾರ್ಗದರ್ಶನ ಸೂಚಿಯಲ್ಲಿ ತಿಳಿಸಿದ್ದಾರೆ.

ಗ್ರಾಮ ಮಟ್ಟದಲ್ಲಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿಗಳನ್ನು ಡೆಂಘೀ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾಪಂಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular