Sunday, April 20, 2025
Google search engine

Homeರಾಜ್ಯಗ್ರಾಮೀಣ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗದಂತೆ ಆಡಳಿತ ಯಂತ್ರ ಸಜ್ಜುಗೊಳಿಸಲು ಪ್ರಿಯಾಂಕ್‌ ಖರ್ಗೆ ಸೂಚನೆ

ಗ್ರಾಮೀಣ ಭಾಗದಲ್ಲಿ ಬೇಸಿಗೆಯಲ್ಲಿ ನೀರಿಗೆ ತೊಂದರೆಯಾಗದಂತೆ ಆಡಳಿತ ಯಂತ್ರ ಸಜ್ಜುಗೊಳಿಸಲು ಪ್ರಿಯಾಂಕ್‌ ಖರ್ಗೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿಯ ನಡುವೆ ಬೇಸಿಗೆ ಅವಧಿ ಬರುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ನೀರಿಗೆ ತೊಂದರೆಯಾಗದಂತೆ ಎಲ್ಲಾ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಸೂಚಿಸಿದ್ದಾರೆ.

ಅವರಿಂದು ಗ್ರಾಮೀಣ ನೀರು ಸರಬರಾಜು ಹಾಗೂ ನರೇಗ ಕಾರ್ಯಕ್ರಮಗಳಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಬಗ್ಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರವೇಜ್‌ ಅವರೊಂದಿಗೆ ಸಭೆ ನಡೆಸಿ, ಪ್ರಸಕ್ತ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಗುರಿ ಸಾಧಿಸಲು ಕಾಮಗಾರಿಗಳ ವೇಗವನ್ನು ಹೆಚ್ಚಿಸುವಂತೆ ಆಡಳಿತಯಂತ್ರವನ್ನು ಸಜ್ಜುಗೊಳಿಸಲು ನಿರ್ದೇಶನ ನೀಡಿದರು.

ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿಗೆ ತೊಂದರೆ ಬಾರದಂತೆ ಅಗತ್ಯವಿರುವ ಗ್ರಾಮಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಲು ಸೂಚಿಸಿದ ಸಚಿವರು ಖಾಸಗಿ ಕೊಳವೆಬಾವಿಗಳನ್ನು ಗುರುತಿಸಿರಿಸಿಕೊಳ್ಳಲು ಸಲಹೆ ಮಾಡಿದರು. ಅತ್ಯಾವಶ್ಯಕ ಪರಿಸ್ಥಿತಿಯಲ್ಲಿ ತೀವ್ರ ಅಭಾವ ತಲೆದೋರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲು ಅನುಕೂಲವಾಗುಂತೆ ವಾಹನಗಳನ್ನು ಸಜ್ಜು ಮಾಡಿಕೊಳ್ಳಲೂ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ ನೀಡಿದರು.

ಕೇಂದ್ರ ಸರ್ಕಾರದಿಂದ ಜಲಜೀವನ್‌ ಹಾಗೂ ನರೇಗ ಯೋಜನೆಗಳಡಿ ಬರಬೇಕಿರುವ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆಯಲು ಸಚಿವರು ತಿಳಿಸಿದರು.

RELATED ARTICLES
- Advertisment -
Google search engine

Most Popular